ದಾವಣಗೆರೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಅದರಲ್ಲಿದ್ದ ಯುವತಿ ಸಾವನ್ನಪ್ಪಿ, ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ದಾವಣಗೆರೆಯ ಹೊರ ವಲಯದ ಮಿಟ್ಲಕಟ್ಟೆ ಗ್ರಾಮದ ಬಳಿ ನಡೆದಿದೆ.
ಮೃತ ಯುವತಿಯನ್ನು ಪ್ರಿಯಾ (21) ಹಾಗೂ ಗಾಯಗೊಂಡ ಯುವಕನನ್ನು ಯೋಗೇಶ್ ಎಂದು ಗುರುತಿಸಲಾಗಿದೆ. ಇಬ್ಬರು ದಾವಣಗೆರೆ ನಿವಾಸಿಗಳಾಗಿದ್ದು, ಕಾಲೇಜು ಮುಗಿಸಿ ಡಾಬಾವೊಂದಕ್ಕೆ ಸ್ನೇಹಿತರ ಜೊತೆ ಊಟಕ್ಕೆ ಹೋಗಿದ್ದರು. ಊಟ ಮುಗಿಸಿ ವಾಪಸ್ಸಾಗುವ ವೇಳೆ ಈ ಅಪಘಾತ ನಡೆದಿದೆ.
ಅಪಘಾತಕ್ಕೂ ಮುನ್ನ ಇಬ್ಬರ ನಡುವೆ ಜಗಳ
ಪ್ರಿಯಾ ಹಾಗೂ ಯೋಗೇಶ್ ನಡುವೆ ಡಾಬಾದಲ್ಲೇ ಗಲಾಟೆ ನಡೆದಿತ್ತು. ಇನ್ನೂ ಇಬ್ಬರ ಜಗಳ ಸಿಸಿ ಕ್ಯಾಮೆರಾದಲ್ಲಿ ಸಹ ಸೆರೆಯಾಗಿದೆ. ಜಗಳವಾಡಿ ಪ್ರಿಯಾ ಹಾಗೂ ಆಕೆಯ ಸ್ನೇಹಿತೆ ಒಂದು ಬೈಕ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ, ಬುಲೆಟ್ ಬೈಕ್‌ನಲ್ಲಿ ಯುವತಿಯರನ್ನು ಹಿಂಬಾಲಿಸಿ ಹೊರಟ ಯೋಗೇಶ್, ನಡು ರಸ್ತೆಯಲ್ಲಿ ನಿಲ್ಲಿಸಿ ಪ್ರಿಯಾಳನ್ನು ತನ್ನ ಬೈಕ್‌ನಲ್ಲಿ ಕೂರಿಸಿಕೊಂಡು ಬಂದಿದ್ದ. ಆಗಲೂ ಜಗಳವಾಡುತ್ತಾ ಅಜಾಗರೂಕತೆಯಿಂದ ಬೈಕ್ ಚಲಾಯಿಸಿದ್ದು, ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಗಂಭೀರವಾಗಿ ಗಾಯಗೊಂಡ ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವಕನ ವಿರುದ್ಧ ಯುವತಿ ಕುಟುಂಬಸ್ಥರು ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…