ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಚಾಲಿತ ವಾಹನಗಳಿಗೆ ಉತ್ತೇ ಜನ ನೀಡಲು ರಾಜ್ಯಾದ್ಯಂತ ಒಂದು ಸಾವಿರ ರೀಚಾರ್ಜ್ ಕೇಂದ್ರಗಳನ್ನು ಸ್ಥಾಪಿ ಸಲು ಸರಕಾರ ಮುಂದಾಗಿದ್ದು, ಈ ಪೈಕಿ 646 ಕಡೆ ಜಾಗಗಳನ್ನು ಗುರುತಿಸಿ ಅಳವಡಿಕೆ ಕಾರ್ಯ ನಡೆದಿದೆ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಮುನಿರಾಜು ಗೌಡ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ರೀಚಾರ್ಜ್ ಸ್ಟೇಷನ್‌ಗಳಿಗೆ ಗುರುತಿಸಿ ರುವ 646 ಜಾಗಗಳು ಮುಖ್ಯವಾಗಿ ಎಲ್ಲ ಜಿಲ್ಲಾ ಕೇಂದ್ರ ಗಳು, ರಾಷ್ಟ್ರೀಯ ಹೆದ್ದಾರಿಗಳ ಉದ್ದಕ್ಕೂ ಮತ್ತು ಪ್ರವಾಸಿ ತಾಣಗಳಲ್ಲಿ ಬರುತ್ತವೆ. ಇದರಲ್ಲಿ ಬೆಂಗಳೂರಿನಲ್ಲೇ 130 ಇದ್ದು, ಈಗಾಗಲೇ ಅಳವಡಿಕೆ ಕಾರ್ಯ ಪೂರ್ಣಗೊಂಡು ಸೇವೆಗೆ ಲಭ್ಯವಾಗಿವೆ ಎಂದರು.
ವಿದ್ಯುತ್ ಚಾಲಿತ ವಾಹನಗಳ ದ್ವಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳ ಬೆಲೆ ಹೆಚ್ಚಿರುವ ಹಿನ್ನೆಲೆಯಲ್ಲಿ ಅದನ್ನು ಖರೀದಿಸುವ ವರ ಸಂಖ್ಯೆ ಕಡಿಮೆಯಾಗುತ್ತಿದೆ. ಕಂಪೆನಿಗಳು ದರ ಕಡಿಮೆ ಮಾಡಿದರೆ, ಹೆಚ್ಚು ಜನರು ವಿದ್ಯುತ್ ಚಾಲಿತ ವಾಹನಗಳನ್ನು ಖರೀದಿಸಲು ಸಹಕಾರಿಯಾಗಲಿದೆ ಎಂದು ತಿಳಿಸಿದ ಅವರು, ಇತ್ತೀಚೆಗೆ ವಿದ್ಯುತ್ ಚಾಲಿತ ವಾಹನಗಳ ಬಳಕೆ, ಸವಾಲುಗಳ ಕುರಿತು ಕಂಪೆನಿಗಳ ಜತೆ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿತ್ತು. ಇದೇ ವಿಷಯವನ್ನು ಅಲ್ಲಿಯೂ ತಿಳಿಸಲಾಗಿದೆ ಎಂದು ಹೇಳಿದರು.
ಇದನ್ನೂ ಓದಿ :
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…