ಮೈಸೂರು: ಮೈಸೂರು ದಸರಾ ಆನೆ ಅರ್ಜುನ ಸಾವನ್ನಪ್ಪಿದ ಬೆನ್ನಲ್ಲೇ ಇದೀಗ ಮತ್ತೊಂದು ದಸರಾ ಆನೆ ಮೃತಪಟ್ಟಿದೆ.
ವಿದ್ಯುತ್ ತಂತಿ ತುಳಿದು ದಸರಾ ಆನೆ ಅಶ್ವತ್ಥಾಮ ದುರಂತ ಅಂತ್ಯಕಂಡಿದ್ದಾನೆ. ನಾಗರಹೊಳೆ ಅರಣ್ಯ ಪ್ರದೇಶದ ಗಡಿಯಲ್ಲಿ ಹಾಕಲಾಗಿರುವ ಸೋಲಾರ್ ತಂತಿ ಬೇಲಿಯಲ್ಲಿ ವಿದ್ಯುತ್ ಪ್ರವಹಿಸಿ ಅಶ್ವತ್ಥಾಮ ಸಾವನ್ನಪ್ಪಿದ್ದಾನೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.
ಹುಣಸೂರು ಪಿರಿಯಾಪಟ್ಟಣ ಗಡಿ ಭಾಗದಲ್ಲಿರುವ ಆನೆ ಶಿಬಿರದಲ್ಲಿದ್ದ 38 ವರ್ಷದ ಅಶ್ವತ್ಥಾಮ ಆನೆ, ಎರಡು ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಭಾಗಿಯಾಗಿತ್ತು.
2017ರಲ್ಲಿ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನಲ್ಲಿ ಅಶ್ವತ್ಥಾಮ ಆನೆಯನ್ನು ಸೆರೆ ಹಿಡಿಯಲಾಗಿತ್ತು. ಬಳಿಕ ಅದನ್ನು ಪಳಗಿಸಿ ಮೈಸೂರು ದಸರಾ ಮಹೋತ್ಸವಕ್ಕೆ ಕರೆತರಲಾಗಿತ್ತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…