ರಾಜ್ಯ ವಿಧಾನಸಭೆ ಚುನಾವಣೆ ಬೆನ್ನಲ್ಲೇ ವಿದ್ಯುತ್ ದರ ಹೆಚ್ಚಳಕ್ಕೆ ವೇದಿಕೆ ಸಿದ್ಧಗೊಂಡಿದೆ. ವಿದ್ಯುತ್ ದರ ಪರಿಷ್ಕರಣೆ ಸಂಬಂಧ ರಾಜ್ಯ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ಸೋಮವಾರ ತನ್ನ ನಿರ್ಧಾರ ಪ್ರಕಟಿಸಲಿದ್ದು, ಈ ಬಾರಿ ಪ್ರತಿ ಯೂನಿಟ್‌ಗೆ ಸರಾಸರಿ 50 ಪೈಸೆಯಷ್ಟು ಹೆಚ್ಚಳವಾಗಬಹುದು ಎಂದು ನಿರೀಕ್ಷಿಸಲಾಗಿದೆ.
ಪ್ರತಿ ವರ್ಷ ಏಪ್ರಿಲ್ ಮೊದಲ ವಾರ ವಿದ್ಯುತ್ ದರ ಪರಿಷ್ಕರಣೆ ತೀರ್ಮಾನ ಹೊರಬೀಳುತ್ತದೆ. ಈ ಬಾರಿ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಈ ಪ್ರಕ್ರಿಯೆ ಮುಂದೂಡಲಾಗಿತ್ತು.
ಯೂನಿಟ್‌ಗೆ 83 ಪೈಸೆಯಿಂದ 1.50 ರೂ. ವರೆಗೂ ಜಾಸ್ತಿ ಮಾಡುವಂತೆ ಎಸ್ಕಾಂಗಳು ಬೇಡಿಕೆ ಸಲ್ಲಿಸಿವೆ. ಈ ಪೈಕಿ ಬಿಬಿಎಂಪಿ ವ್ಯಾಪ್ತಿಗೆ ಸೀಮಿತವಾಗಿ ವಿದ್ಯುತ್ ದರದಲ್ಲಿ ಭಾರಿ ಹೆಚ್ಚಳ ಮಾಡುವಂತೆ ಬೆಸ್ಕಾಂ ಒತ್ತಡ ತಂದಿದೆ. ಈ ಎಲ್ಲ ಪ್ರಸ್ತಾವನೆ ಆಧರಿಸಿ ಎಲ್ಲ ವಿದ್ಯುತ್ ಸರಬರಾಜು ಕಂಪನಿಗಳ ಅಡಿ ಬರುವ ಜಿಲ್ಲೆಗಳಿಗೆ ಭೇಟಿ ನೀಡಿದ ಕೆಇಆರ್‌ಸಿ ಅಧಿಕಾರಿಗಳು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ್ದರು.
ಎಸ್ಕಾಂಗಳ ಪ್ರಸ್ತಾವ ಹಾಗೂ ಬಳಕೆದಾರರ ಅಭಿಪ್ರಾಯದೊಂದಿಗೆ ದರ ಪರಿಷ್ಕರಣೆ ಪ್ರಕ್ರಿಯೆಗೆ ಅಂತಿಮ ಸ್ವರೂಪ ಕೊಡಲಾಗಿದೆ. ಆಯೋಗದ ಅಧ್ಯಕ್ಷ ಹೊಸ ದರ ಪಟ್ಟಿಯ ವಿವರ ಒದಗಿಸಲಿದ್ದಾರೆ. ಇದು ಏಪ್ರಿಲ್ 1ರಿಂದ ಅನ್ವಯವಾಗುವಂತೆ ಜಾರಿಯಾಗಲಿದೆ.
ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…
ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…
ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…
ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್ ಶೆಟ್ಟಿ ಆತ್ಮಹತ್ಯೆ…
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…