Featured

ವಿದ್ಯುತ್ ಶಾಕ್‌ಗೆ 8ರ ಬಾಲಕ ಬಲಿ – vishwanews24

ವಿದ್ಯುತ್ ಶಾಕ್‌ಗೆ 8ರ ಬಾಲಕ ಬಲಿ

ಚಿಕ್ಕಬಳ್ಳಾಪುರ: ಬೆಳ್ಳಂಬೆಳಗ್ಗೆ ವಿದ್ಯುತ್ ಶಾಕ್‌ಗೆ ಬಾಲಕನೊಬ್ಬ ಬಲಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿಯಲ್ಲಿ  ನಡೆದಿದೆ.

ಮಂಚೇನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗ ಈ ದುರ್ಘಟನೆ ನಡೆದಿದ್ದು, ಮೀನಾಕ್ಷಿ-ಮೂರ್ತಿ ದಂಪತಿಗಳ ಪುತ್ರ ನಾಗೇಂದ್ರ (8) ಕರೆಂಟ್ ಶಾಕ್‌ನಿಂದ ಮೃತಪಟ್ಟಿದ್ದಾನೆ. ರಸ್ತೆ ದಾಟಲು ಹೋದ ಸಂದರ್ಭ ಟ್ರಾನ್ಸ್‌ಫಾರ್ಮರ್ ಗ್ರೌಂಡಿಂಗ್ ವೈರ್‌ನಿಂದ ವಿದ್ಯುತ್ ಶಾಕ್ ತಗುಲಿ ಬಾಲಕ ಕೊನೆಯುಸಿರೆಳೆದಿದ್ದಾನೆ.

ರಸ್ತೆ ಅಗಲೀಕರಣಕ್ಕಾಗಿ ಟ್ರಾನ್ಸ್‌ಫಾರ್ಮರ್ ಬಳಿ ಮಣ್ಣು ತೆಗೆಯಲಾಗಿತ್ತು. ಮಣ್ಣು ತೆಗೆದ ಪರಿಣಾಮ ಹೊಂಡದಲ್ಲಿ ನೀರು ಶೇಖರಣೆಯಾಗಿದೆ. ರಸ್ತೆ ದಾಟಲು ಟ್ರಾನ್ಸ್‌ಫಾರ್ಮರ್ ಬದಿಯಲ್ಲಿ ಹೋಗುವಾಗ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ಮಂಚೇನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

12 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

13 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

13 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

13 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

14 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

14 hours ago