Featured

ವಿದ್ಯುತ್ ಶಾಕ್ : ಚಿಕಿತ್ಸೆ ಫಲಕಾರಿಯಾಗದೆ ರಾಷ್ಟ್ರೀಯ ಫುಟ್‍ಬಾಲ್ ಆಟಗಾರ ವಿಶ್ವಾಸ್  ನಿಧನ – Vishwanews24

ವಿದ್ಯುತ್ ಶಾಕ್ : ಚಿಕಿತ್ಸೆ ಫಲಕಾರಿಯಾಗದೆ ರಾಷ್ಟ್ರೀಯ ಫುಟ್‍ಬಾಲ್ ಆಟಗಾರ ವಿಶ್ವಾಸ್  ನಿಧನ

ಮಂಡ್ಯ: ವಿದ್ಯುತ್ ಶಾಕ್ ತಗುಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಗರದ ಗುತ್ತಲು ಬಡಾವಣೆ ನಿವಾಸಿ ರಾಷ್ಟ್ರೀಯ ಫುಟ್‍ಬಾಲ್ ಆಟಗಾರ ವಿಶ್ವಾಸ್ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.

ಜು.1ರಂದು ಸ್ವರ್ಣ ಫುಟ್‍ಬಾಲ್ ಸಂಸ್ಥೆ ಆಯೋಜಿಸಿದ್ದ ಹೊನಲು ಬೆಳಕಿನ ಏಳು ಮಂದಿ ಆಟಗಾರರ ಫುಟ್‍ಬಾಲ್‌ ಪಂದ್ಯಕ್ಕಾಗಿ ತಯಾರಿಯಲ್ಲಿದ್ದ ಪ್ರತಿಭಾವಂತ ಆಟಗಾರ ವಿಶ್ವಾಸ್, ಮನೆಯಲ್ಲಿ ಆಕಸ್ಮಿಕವಾಗಿ ವಿದ್ಯುತ್ ಶಾಕ್‍ಗೆ ಒಳಗಾಗಿದ್ದರು. ಬಳಿಕ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ನರಸಿಂಹಮೂರ್ತಿ ಮತ್ತು ಶ್ಯಾಮಲಾ ದಂಪತಿಯ ಪುತ್ರ ವಿಶ್ವಾಸ್, ನಗರದ ಪಿಇಎಸ್ ಕಾಲೇಜ್‍ನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದರು. ಓದಿನ ಜೊತೆಗೆ ಫುಟ್‍ಬಾಲ್ ಕ್ರೀಡೆಯಲ್ಲಿಯೂ ತೊಡಗಿಸಿಕೊಂಡಿದ್ದರು. ಆದರೆ ಈ ಆಟಗಾರನ ಬಾಳಿನಲ್ಲಿ ವಿಧಿಯ ಆಟ ಬೇರೆಯಾಗಿತ್ತು. ಫುಟ್‍ಬಾಲ್ ಆಟದಲ್ಲಿ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಬೇಕೆಂಬ ಕನಸು ಕಂಡಿದ್ದ ವಿಶ್ವಾಸ್ ವಿದ್ಯುತ್‌ ಶಾಕ್ ತಗುಲಿ ದೇಹದ ಶೇ.80ರಷ್ಟು ಭಾಗ ಹಾನಿಗೊಳಗಾಗಿ ಕೋಮಾ ಸ್ಥಿತಿಗೆ ತಲುಪಿ ಆಸ್ಪತ್ರೆ ಸೇರಿದ್ದರು. ನಂತರ ಪೋಷಕರಿಗೆ ಆರ್ಥಿಕವಾಗಿ ಕಷ್ಟ ಇದ್ದುದರಿಂದಾಗಿ ವಿಶ್ವಾಸ್‍ಗೆ ಚಿಕಿತ್ಸೆ ಕೊಡಿಸಲು ಸಹಾಯ ಕೇಳಿದ್ದರು. ಸಾವಿರಾರು ಜನ ವಿಶ್ವಾಸ್‍ಗಾಗಿ ದೇಣಿಗೆ ನೀಡಿದ್ದರು. ಆದರೆ ವಿಶ್ವಾಸ್ ಮಾತ್ರ ಇಂದು ಎಲ್ಲರನ್ನು ಬಿಟ್ಟು ಇಹಲೋಕ ತ್ಯಜಿಸಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

17 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

18 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

18 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

18 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

18 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago