ಚಿಕ್ಕೋಡಿ (ಬೆಳಗಾವಿ): ಅಥಣಿಯಲ್ಲಿ ತಂದೆ ಮತ್ತು ಮಗನಿಗೆ ವಿದ್ಯುತ್ ಶಾಕ್ ತಗುಲಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಸಂಭವಿಸಿದೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಮಲ್ಲಿಕಾರ್ಜುನ ಸದಾಶಿವ ಪೂಜಾರಿ (32) ಹಾಗೂ ಪ್ರೀತಮ್ ಮಲ್ಲಿಕಾರ್ಜುನ ಪೂಜಾರಿ (7) ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಭಾನುವಾರ ಮಧ್ಯಾಹ್ನ ಮಲ್ಲಿಕಾರ್ಜುನ ತೋಟದಲ್ಲಿ ಬೋರ್‌ವೆಲ್ ಮೋಟಾರ್ ಆನ್ ಮಾಡಿ ಬೇರೆ ಕಡೆ ನೀರು ತಿರುವಿಗೆ (ವಾಲ್ ಟರ್ನ್) ಮುಂದಾಗಿದ್ದಾರೆ.
ಆದರೆ ಬೋರ್‌ವೆಲ್ ಹತ್ತಿರ ವೈರ್ ತುಂಡಾಗಿದ್ದು ಗಮನಿಸದೇ ವಿದ್ಯುತ್ ಕೈಗೆ ತಗುಲಿ ಸಾವು ಸಂಭವಿಸಿದೆ. ಅಪ್ಪನನ್ನು ಉಳಿಸಲು ಹೋಗಿ ಮಗ ಪ್ರೀತಮ್ ಕೂಡ ಸ್ಥಳದಲ್ಲಿ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…