ಆನೇಕಲ್: ವಿದ್ಯುತ್ ಶಾಕ್‍ನಿಂದ ಯುವ ಇಂಜಿನಿಯರ್ ಸಾವಿಗೀಡಾದ ಘಟನೆ ತಾಲೂಕಿನ ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಯಸ್ಕಾವ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ಈ ದುರ್ಘಟನೆ ಸಂಭವಿಸಿದೆ
ಬೆಂಗಳೂರಿನ ನಿವಾಸಿ ಕೌಶಿಕ್ (27) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಪ್ಯಾನಲ್ ಬೋರ್ಡ್ ತಯಾರು ಮಾಡಬೇಕಾದರೆ ವಿದ್ಯುತ್ ತಗಲಿದೆ. ಕೂಡಲೆ ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯೆಯೇ ಅವರು ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.
ಕಂಪನಿಯಲ್ಲಿ ಕೆಲಸ ಮಾಡಬೇಕಾದರೆ ಯಾವುದೇ ಸುರಕ್ಷತೆ ಇರಲಿಲ್ಲ. ಹೀಗಾಗಿ ಕಾರ್ತಿಕ್ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಅಲ್ಲದೇ ಕಂಪನಿಯಿಂದ ಕೈಗೆ ಗ್ಲೌಸ್ ಸಹ ನೀಡದೆ ನಿರ್ಲಕ್ಷ ತೋರಿದೆ. ಇದರಿಂದ ಮಗನನ್ನು ಕಳೆದುಕೊಂಡಿದ್ದೇವೆ ಎಂದು ತಾಯಿ ಕಣ್ಣೀರಿಟ್ಟಿದ್ದಾರೆ.ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…