ಶಿವಮೊಗ್ಗ: ವಿದ್ಯುತ್ ತಗುಲಿ ಯುವಕ ಸಾವನ್ನಪ್ಪಿದ ಘಟನೆ ರಿಪ್ಪನ್‌ಪೇಟೆಯ ಗವಟೂರಿನ ಹಳೂರು ಗ್ರಾಮದಲ್ಲಿ ನಡೆದಿದೆ.
ಕಾರ್ತಿಕ್ ಎಸ್ (19) ಮೃತಪಟ್ಟ ಯುವಕ. ಶುಕ್ರವಾರ ಬೆಳಗಿನಜಾವ ಮನೆ ಮುಂಭಾಗದಲ್ಲಿ ಘಟನೆ ನಡೆದಿದೆ. ಮನೆ ಮುಂಭಾಗದ IBX ಬೇಲಿ ಬಳಿಯಲ್ಲಿ ಮೂತ್ರ ವಿಸರ್ಜನೆ ಮಾಡುವಾಗ ಕರೆಂಟ್ ಶಾಕ್ ಹೊಡೆದಿದೆ.
ಮನೆ ಮುಂಭಾಗದ ಬೇಲಿ ಮೇಲೆ ವಿದ್ಯುತ್ ವೈರ್ ತುಂಡಾಗಿ ಬಿದ್ದಿತ್ತು. ಏಕಾಏಕಿ ವಿದ್ಯುತ್ ಪ್ರವಹಿಸಿ ಬೇಲಿಯ ಮೇಲೆ ಬಿದ್ದ ಯುವಕನನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಸಾಗಿಸಿದರೂ ಬದುಕುಳಿಯಲಿಲ್ಲ.
ಕಾರ್ತಿಕ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿಬಿಎ ವ್ಯಾಸಾಂಗ ಮಾಡುತಿದ್ದ.ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…