ಕುಣಿಗಲ್ : ಕ್ರೇಜಿಸ್ಟಾರ್ ರವಿಚಂದ್ರನ್‌ರನ್ನು ಹೋಲುವ, ಜ್ಯೂನಿಯರ್ ರವಿಚಂದ್ರನ್ ಎಂದೇ ಖ್ಯಾತಿಗಳಿಸಿದ್ದ ಲಕ್ಮೀ ನಾರಾಯಣ ಎಂಬವರು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ.
ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಕಸಬಾ ಹೋಬಳಿಯ ಹೇರೂರು ಗ್ರಾಮದ ಲಕ್ಷ್ಮೀ ನಾರಾಯಣ್ (35) ಇಂದು ತಮ್ಮ ಮನೆಯಲ್ಲಿರುವ ಸಂಪ್ ಗೆ ನೀರು ಬಿಡಲು ಮೋಟರ್ ಸ್ವಿಚ್ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಕರೆಂಟ್ ಶಾಕ್ ನಿಂದ ಲಕ್ಷ್ಮೀ ನಾರಾಯಣ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಇವರು ತುಮಕೂರಿನ ಆರ್ಕೆಸ್ಟ್ರಾವೊಂದರಲ್ಲಿ ಕಲಾವಿದರಾಗಿ ಕೆಲಸ ಮಾಡುತ್ತಿದ್ದರು. ಲಕ್ಷ್ಮೀ ನಾರಾಯಣ್ ರಾಜ್ಯದೆಲ್ಲೆಡೆ ಸಂಗೀತ ಸಂಜೆ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಹಾಡು ಹೇಳಿ ಜನರನ್ನು ರಂಜಿಸುತ್ತಿದ್ದರು. ಜೊತೆಗೆ ರವಿಚಂದ್ರನ್ ಅವರಂತೆಯೇ ಕಾಣುತ್ತಿದ್ದ ಅವರು ರವಿಚಂದ್ರನ್ ಅಭಿನಯದ ದೃಶ್ಯಗಳನ್ನು ವೇದಿಕೆ ಮೇಲೆ ಅಭಿನಯಿಸುವ ಮೂಲಕ ಜನರ ಮನಗೆದ್ದಿದ್ದರು.
ಸ್ಯಾಂಡಲ್‌ವುಡ್ ಹಿರಿಯ ನಟ ರವಿಚಂದ್ರನ್ ಹೋಲುವ ಲಕ್ಷ್ಮೀನಾರಾಯಣ್ ಅವರ ರೀತಿಯಲ್ಲಿಯೇ ವೇಷಭೂಷಣ ಧರಿಸಿಕೊಳ್ಳುತ್ತಿದ್ದರು. ಇವರು ಅಪಾರ ಅಭಿಮಾನಿ ವರ್ಗವನ್ನು ಪಡೆದಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…