Featured

ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಮೂವರು ಅಭಿಮಾನಿಗಳ ಮನೆಗೆ ಯಶ್‌ ಭೇಟಿ : ಕುಟುಂಬಕ್ಕೆ ಸಾಂತ್ವನ – vishwanews24

ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಮೂವರು ಅಭಿಮಾನಿಗಳ ಮನೆಗೆ ಯಶ್‌ ಭೇಟಿ : ಕುಟುಂಬಕ್ಕೆ ಸಾಂತ್ವನ

ನಟ ಯಶ್  ಹುಟ್ಟುಹಬ್ಬದ ಸಲುವಾಗಿ ಕಟೌಟ್ ನಿಲ್ಲಿಸುವುದಕ್ಕೆ ಹೋಗಿ ವಿದ್ಯುತ್ ಸ್ಪರ್ಶದಿಂದ ನಿಧನರಾಗಿರುವ ಮೂವರು ಅಭಿಮಾನಿಗಳ ಕುಟುಂಬಸ್ಥರನ್ನು ಭೇಟಿ ಮಾಡಲು ರಾಕಿಂಗ್‌ ಸ್ಟಾರ್ ಗದಗದ ಸೊರಣಗಿ ಬಂದಿದ್ದಾರೆ. ಭದ್ರತೆಗಾಗಿ ಎಸ್ ಪಿ ವಾಹನದಲ್ಲಿ ಯಶ್ ಆಗಮಿಸಿದ್ದು, ಮೃತ‌ಪಟ್ಟ ಅಭಿಮಾನಿಗಳ ಕುಟುಂಬಕ್ಕೆ ಸಾಂತ್ವನ ನೀಡಿದ್ದಾರೆ

ಮೃತ ಮುರಳಿ ತಂದೆ ಕೈ ಹಿಡಿದು ಯಶ್‌ ಧೈರ್ಯ ತುಂಬಿದ್ದಾರೆ. 3 ಜನ ಮೃತರ ಮನೆಗೆ ಯಶ್‌ ಭೇಟಿ ನೀಡಿದ್ದಾರೆ. ಮೊದಲು ಮೃತ ಮುರಳಿ ಮನೆಗೆ ತೆರಳಿ, ಅವರ ತಂದೆಗೆ ಧೈರ್ಯ ಹೇಳಿ, ಮೃತ ನವೀನ್‌ ಗಾಜಿ ಮತ್ತು ಹನುಮಂತ ಹರಿಜನ್‌ ಮನೆಗೆ ಭೇಟಿ ಯಶ್‌ ಸಾಂತ್ವನ ಹೇಳಿದ್ದಾರೆ.

ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲು ಹುಬ್ಬಳ್ಳಿಗೆ ಯಶ್ ಬಂದಿಳಿದಿದ್ದಾರೆ. ಅಭಿಮಾನಿಗಳ ಕುಟುಂಬಕ್ಕೆ ಸಾಂತ್ವನ ಹೇಳಲು ಯಶ್ ಆಗಮಿಸಿದ್ದಾರೆ. ಯಶ್ ಹುಟ್ಟುಹಬ್ಬಕ್ಕೆ ಬೃಹತ್ ಗಾತ್ರದ ಕಟೌಟ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶದಿಂದ 3 ಜನ ಸಾವನ್ನಪ್ಪಿದ ಘಟನೆ ಲಕ್ಷ್ಮೇಶ್ವರ ಸೂರಣಗಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಮೃತರನ್ನು ಹನುಮಂತ ಹರಿಜನ್ (24), ಮುರಳಿ ನಡುವಿನಮನಿ (20) ಹಾಗೂ ನವೀನ್ ಗಾಜಿ (20) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮಂಜುನಾಥ್, ಪ್ರಕಾಶ್ ಹಾಗೂ ಹನುಮಂತ ಎಂಬವರಿಗೆ ಗಂಭೀರ ಗಾಯಾಳಾಗಿವೆ. ಮಧ್ಯರಾತ್ರಿ 1 ಗಂಟೆ ವೇಳೆ ಕಟೌಟ್ ಕಟ್ಟುವ ವೇಳೆ ಈ ದುರ್ಘಟನೆ ನಡೆದಿದೆ. ಗಾಯಾಳುಗಳನ್ನು ಲಕ್ಷ್ಮೇಶ್ವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

ಮಧ್ಯರಾತ್ರಿ ವೇಳೆ, ಹತ್ತಾರು ಜನ ಯುವಕರು ಸೇರಿಕೊಂಡು ತಮ್ಮ ನೆಚ್ಚಿನ ನಟನ ಕಟೌಟ್ ಕಟ್ಟಲು ಮುಂದಾಗಿದ್ದಾರೆ. ರಾತ್ರಿ ಸಮಯ ಆಗಿದ್ದರಿಂದ ವಿದ್ಯುತ್ ತಂತಿ ಯುವಕರ ಗಮನಕ್ಕೆ ಬಂದಿಲ್ಲ. ಇದರಿಂದ ಈ ದುರ್ಘಟನೆ ಸಂಭವಿಸಿದೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಸೂತಕದ ಛಾಯೆ ಮನೆ ಮಾಡಿದೆ.ಈ ಸಂಬಂಧ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

13 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

13 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

14 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

14 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

14 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

14 hours ago