Featured

ವಿಧಾನಸಭಾ ಚುನಾವಣೆ: ಉಡುಪಿ ಜಿಲ್ಲೆಯ ಐದು ಕೇಂದ್ರಗಳಲ್ಲಿ ಮಸ್ಟರಿಂಗ್ ಪ್ರಕ್ರಿಯೆ ಆರಂಭ – Vishwanews24

ವಿಧಾನಸಭಾ ಚುನಾವಣೆ: ಉಡುಪಿ ಜಿಲ್ಲೆಯ ಐದು ಕೇಂದ್ರಗಳಲ್ಲಿ ಮಸ್ಟರಿಂಗ್ ಪ್ರಕ್ರಿಯೆ ಆರಂಭ

ಉಡುಪಿ: ವಿಧಾನಸಭಾ ಚುನಾವಣೆ ಪ್ರಯುಕ್ತ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಥಾಪಿಸಲಾದ ಮಸ್ಟರಿಂಗ್ ಕೇಂದ್ರಗಳಲ್ಲಿ ಇಂದು ಮಸ್ಟರಿಂಗ್ ಪ್ರಕ್ರಿಯೆ ನಡೆಯಿತು.

ಬೈಂದೂರು ಕ್ಷೇತ್ರದ ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜು, ಕುಂದಾಪುರ ಕ್ಷೇತ್ರದ ಕುಂದಾಪುರ ಭಂಡಾರ್‌ಕಾರ್ಸ್‌ ಸಾಯನ್ಸ್ ಆಯಂಡ್ ಆರ್ಟ್ಸ್ ಕಾಲೇಜು, ಉಡುಪಿ ಕ್ಷೇತ್ರದ ಬ್ರಹ್ಮಗಿರಿ ಸೈಂಟ್ ಸಿಸಿಲೀಸ್ ಶಾಲೆ, ಕಾಪು ಕ್ಷೇತ್ರದ ಉಳಿಯಾರಗೋಳಿ ದಂಡತೀರ್ಥ ಪಿಯು ಕಾಲೇಜು ಹಾಗೂ ಕಾರ್ಕಳ ಕ್ಷೇತ್ರದ ಕಾರ್ಕಳ ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಮಸ್ಟರಿಂಗ್ ಕೇಂದ್ರಗಳಿಂದ ಮತಗಟ್ಟೆ ಅಧಿಕಾರಿಗಳು ತಮ್ಮ ತಂಡದೊಂದಿಗೆ ಮತಗಟ್ಟೆಗಳಿಗೆ ತೆರಳಿದರು.

ಮತಗಟ್ಟೆ ಅಧಿಕಾರಿಗಳು ಪೊಲೀಸ್ ಭದ್ರತೆ ಜೊತೆ ಮತಯಂತ್ರಗಳೊಂದಿಗೆ ತಮಗೆ ಸೂಚಿಸಿದ ಮಾರ್ಗಗಳ ಬಸ್‌ಗಳಲ್ಲಿ ಮತಗಟ್ಟೆಗಳಿಗೆ ತೆರಳಿದರು. ಆಯಾ ಕ್ಷೇತ್ರದ ತಾಲೂಕು ಚುನಾವಣಾಧಿಕಾರಿಗಳು ಮಸ್ಟರಿಂಗ್ ಕಾರ್ಯದ ನೇತೃತ್ವ ವನ್ನು ವಹಿಸಿದ್ದರು.

ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಹಾಗೂ ಎಸ್ಪಿ ಅಕ್ಷಯ್ ಹಾಕೇ ಮಚ್ಚೀಂದ್ರ ಉಡುಪಿ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೆ ಜಿಲ್ಲಾಧಿಕಾರಿ ಬೈಂದೂರು, ಕುಂದಾಪುರ, ಕಾಪು ಕೇಂದ್ರ ಗಳಿಗೂ ತೆರಳಿ ಮಸ್ಟರಿಂಗ್ ಪ್ರಕ್ರಿಯೆಯನ್ನು ಪರಿಶೀಲಿಸಿದರು.

Vishwa News 24

Recent Posts

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  – vishwanews24

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ  ಜಿಲ್ಲೆಯ ಚಿಂಚಿನಾಡ…

3 days ago

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ – vishwanews24

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…

3 days ago

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ – vishwanews24

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…

3 days ago

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು – vishwanews24

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…

3 days ago

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ : ಸಿಎಂ ಡಿ.ಕೆ. ಶಿ – vishwanews24

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…

3 days ago

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ – vishwanews24

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…

3 days ago