ಉಡುಪಿ: ವಿಧಾನಸಭಾ ಚುನಾವಣೆ ಪ್ರಯುಕ್ತ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಥಾಪಿಸಲಾದ ಮಸ್ಟರಿಂಗ್ ಕೇಂದ್ರಗಳಲ್ಲಿ ಇಂದು ಮಸ್ಟರಿಂಗ್ ಪ್ರಕ್ರಿಯೆ ನಡೆಯಿತು.
ಬೈಂದೂರು ಕ್ಷೇತ್ರದ ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜು, ಕುಂದಾಪುರ ಕ್ಷೇತ್ರದ ಕುಂದಾಪುರ ಭಂಡಾರ್‌ಕಾರ್ಸ್ ಸಾಯನ್ಸ್ ಆಯಂಡ್ ಆರ್ಟ್ಸ್ ಕಾಲೇಜು, ಉಡುಪಿ ಕ್ಷೇತ್ರದ ಬ್ರಹ್ಮಗಿರಿ ಸೈಂಟ್ ಸಿಸಿಲೀಸ್ ಶಾಲೆ, ಕಾಪು ಕ್ಷೇತ್ರದ ಉಳಿಯಾರಗೋಳಿ ದಂಡತೀರ್ಥ ಪಿಯು ಕಾಲೇಜು ಹಾಗೂ ಕಾರ್ಕಳ ಕ್ಷೇತ್ರದ ಕಾರ್ಕಳ ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಮಸ್ಟರಿಂಗ್ ಕೇಂದ್ರಗಳಿಂದ ಮತಗಟ್ಟೆ ಅಧಿಕಾರಿಗಳು ತಮ್ಮ ತಂಡದೊಂದಿಗೆ ಮತಗಟ್ಟೆಗಳಿಗೆ ತೆರಳಿದರು.
ಮತಗಟ್ಟೆ ಅಧಿಕಾರಿಗಳು ಪೊಲೀಸ್ ಭದ್ರತೆ ಜೊತೆ ಮತಯಂತ್ರಗಳೊಂದಿಗೆ ತಮಗೆ ಸೂಚಿಸಿದ ಮಾರ್ಗಗಳ ಬಸ್‌ಗಳಲ್ಲಿ ಮತಗಟ್ಟೆಗಳಿಗೆ ತೆರಳಿದರು. ಆಯಾ ಕ್ಷೇತ್ರದ ತಾಲೂಕು ಚುನಾವಣಾಧಿಕಾರಿಗಳು ಮಸ್ಟರಿಂಗ್ ಕಾರ್ಯದ ನೇತೃತ್ವ ವನ್ನು ವಹಿಸಿದ್ದರು.
ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಹಾಗೂ ಎಸ್ಪಿ ಅಕ್ಷಯ್ ಹಾಕೇ ಮಚ್ಚೀಂದ್ರ ಉಡುಪಿ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೆ ಜಿಲ್ಲಾಧಿಕಾರಿ ಬೈಂದೂರು, ಕುಂದಾಪುರ, ಕಾಪು ಕೇಂದ್ರ ಗಳಿಗೂ ತೆರಳಿ ಮಸ್ಟರಿಂಗ್ ಪ್ರಕ್ರಿಯೆಯನ್ನು ಪರಿಶೀಲಿಸಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…