ವಿಧಾನಸಭೆ ಅಧಿವೇಶನ: ‘ಒಂದು ದೇಶ ಒಂದು ಚುನಾವಣೆ’ ; ಕಾಂಗ್ರೆಸ್ ತೀವ್ರ ವಿರೋಧ -Vishwanews24
ವಿಧಾನಸಭೆ ಅಧಿವೇಶನ: ‘ಒಂದು ದೇಶ ಒಂದು ಚುನಾವಣೆ ; ಕಾಂಗ್ರೆಸ್ ತೀವ್ರ ವಿರೋಧ -Vishwanews24
ಬೆಂಗಳೂರು: ಕರ್ನಾಟಕ 15ನೇ ವಿಧಾನಸಭೆಯ 9ನೇ ಅಧಿವೇಶನ ಗುರುವಾರ ಆರಂಭವಾಗಿದೆ. ‘ಒಂದು ದೇಶ ಒಂದು ಚುನಾವಣೆ’ ಚರ್ಚೆ ಆರಂಭವಾಗಿದ್ದು, ಕಾಂಗ್ರೆಸ್ ಸದಸ್ಯರು ಧರಣಿ ನಡೆಸಿದ್ದಾರೆ.
ಚರ್ಚೆಗೆ ಒಪ್ಪಿಕೊಂಡು ಈಗ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯಾದ ಕ್ರಮ ಅಲ್ಲ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅಸಮಾಧಾನ ವ್ಯಕ್ತಪಡಿಸಿದರು.
‘ಒಂದು ದೇಶ ಒಂದು ಚುನಾವಣೆ ಯೋಚನೆಯೇ ಅವಾಸ್ತವಿಕ’ ಎಂದು ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದರು. ಕಾಂಗ್ರೆಸ್ನ ಘೋಷಣೆಯ ನಡುವೆಯೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾಷಣ ಮಾಡಿದರು.
ಪ್ರಸ್ತಾಪ ವಿರೋಧಿಸಿ ಕಾಂಗ್ರೆಸ್ ಧರಣಿ ಮುಂದುವರಿದಿದ್ದರಿಂದ ಕಲಾಪವನ್ನು ಸಭಾಧ್ಯಕ್ಷ ಕಾಗೇರಿ 15 ನಿಮಿಷ ಮುಂದೂಡಿದರು.
ಒಂದು ದೇಶ, ಒಂದು ಚುನಾವಣೆ : ವಿರೋಧ ವ್ಯಕ್ತಪಡಿಸಿದ ಡಿ.ಕೆ. ಶಿ -Vishwanews24
ಅಧಿವೇಶನದ ಅಂಗವಾಗಿ ಬುಧವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಂಪುಟ ಸಭೆ ನಡೆದಿತ್ತು.
ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ವಿಲೇವಾರಿಗೆ ಪ್ರತ್ಯೇಕ ಕಂಪನಿ ಸ್ಥಾಪನೆ, ಆಯುಷ್ ವೈದ್ಯಕೀಯ ಕಾಲೇಜುಗಳ ಬೋಧಕ ಸಿಬ್ಬಂದಿ ಹಾಗೂ ಔಷಧ ನಿಯಂತ್ರಣ ಇಲಾಖೆಯ ಸಿಬ್ಬಂದಿಯ ವೇತನ ಪರಿಷ್ಕರಣೆ ಸೇರಿದಂತೆ ಹಲವು ವಿಷಯಗಳ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿತ್ತು.
ತಾಜ್ ಮಹಲ್ನಲ್ಲಿ ಬಾಂಬ್ ಇರುವುದಾಗಿ ಕರೆ : ಸ್ಥಳಕ್ಕೆ ದೌಡಾಯಿಸಿದ ರಕ್ಷಣಾ ಪಡೆ -Vishwanews24
