Featured

ವಿಧಾನಸಭೆ ನೂತನ ಸ್ಪೀಕರ್ ಆಗಿ ಯು.ಟಿ. ಖಾದರ್ – Vishwanews24

ವಿಧಾನಸಭೆ ನೂತನ ಸ್ಪೀಕರ್ ಆಗಿ ಯು.ಟಿ. ಖಾದರ್ ಆಯ್ಕೆ

ಸಿಎಂ ಸಿದ್ದರಾಮಯ್ಯ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಶಾಸಕ ಯು.ಟಿ. ಖಾದರ್ ಹೆಸರು ಪ್ರಸ್ತಾವನೆ ಮಾಡಿದ್ದಾರೆ. ಸಿಎಂ ಪ್ರಸ್ತಾವವನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅನುಮೋದಿಸಿದ್ದಾರೆ. ವಿಧಾನಸಭೆ ಸ್ಪೀಕರ್ ಆಗಿ ಯು.ಟಿ. ಖಾದರ್ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ನೂತನ ಸ್ಪೀಕರ್​ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ನೂತನ ಸ್ಪೀಕರ್ ಆಗಿ ಆಯ್ಕೆಯಾದ ಯು.ಟಿ.ಖಾದರ್​ಗೆ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಸ್ಪೀಕರ್​ ಯು.ಟಿ.ಖಾದರ್​ಗೆ ಅತಿ ಹೆಚ್ಚು ಪ್ರಶ್ನೆ ಕೇಳಿದ್ದಕ್ಕೆ ಸದನವೀರ ಪ್ರಶಸ್ತಿಯೂ ಸಿಕ್ಕಿತ್ತು. ವಿಪಕ್ಷ ಉಪನಾಯಕರಾಗಿಯೂ ಯು.ಟಿ.ಖಾದರ್​ ಉತ್ತಮ ಕೆಲಸ ಮಾಡಿದ್ದಾರೆ. ವಿಧಾನಸಭೆ ಪ್ರಜಾಪ್ರಭುತ್ವದ ದೇಗುಲ. ಸದನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕು. ನಾಡಿನ ಅಭಿವೃದ್ಧಿ, 7 ಕೋಟಿ ಕನ್ನಡಿಗರ ಹಿತರಕ್ಷಣೆ ಆಗಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ಪೀಕರ್ ಸ್ಥಾನ ಅತ್ಯುನ್ನತವಾದುದು. ರಾಜ್ಯದ ಜಿಡಿಪಿ ಬೆಳವಣಿಗೆ ಕೂಡ ಆಗಬೇಕು ಎಂದರು.

ನೂತನ ಸ್ಪೀಕರ್​ ಖಾದರ್​ಗೆ ಅಭಿನಂದನೆ ಸಲ್ಲಿಸಿದ ಬೊಮ್ಮಾಯಿ

ನೂತನ ಸ್ಪೀಕರ್​ ಖಾದರ್​ಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅಭಿನಂದನೆ ಸಲ್ಲಿಸಿದ್ದಾರೆ. ಕರ್ನಾಟಕದ ವಿಧಾನಮಂಡಲಕ್ಕೆ ತನ್ನದೇ ಆದ ಇತಿಹಾಸವಿದೆ. ಇಡೀ ದೇಶಕ್ಕೆ ಮಾರ್ಗದರ್ಶನ ನೀಡಿದ ವಿಧಾನಮಂಡಲವಿದು. ಯು.ಟಿ.ಖಾದರ್​ ಶಾಸಕರಾಗಿ, ಸಚಿವರಾಗಿ ಕೆಲಸ ಮಾಡಿದ್ದಾರೆ. ಯು.ಟಿ.ಖಾದರ್ ವಿಪಕ್ಷ ಉಪನಾಯಕರಾಗಿಯೂ ಉತ್ತಮ ಕೆಲಸ ಮಾಡಿದ್ದಾರೆ. ಈ ಹಿಂದೆ ಸ್ಪೀಕರ್​ಗಳು ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ನ್ಯಾಯಾಂಗಕ್ಕಿಂತ ಎತ್ತರವಾದದ್ದು ಸ್ಪೀಕರ್​ ಸ್ಥಾನ. ನಿಷ್ಪಕ್ಷಪಾತವಾಗಿ ತಾವು ಸದನವನ್ನು ನಡೆಸಬೇಕು. ವಿಪಕ್ಷ ಸದಸ್ಯರ ಹೇಳಿಕೆಗೆ ಸ್ಪೀಕರ್​ ಹೆಚ್ಚು ಅವಕಾಶ ಕೊಡಬೇಕು. ಚರ್ಚೆ ವೇಳೆ ಕೊನೆಯ ಸಾಲಿನವರಿಗೆ ಹೆಚ್ಚು ಅವಕಾಶ ಕೊಡಬೇಕು. ಸ್ಪೀಕರ್ ಹೊಸ ವಿಚಾರಕ್ಕೆ ಅವಕಾಶ ಮಾಡಿಕೊಡುವ ವಿಶ್ವಾಸವಿದೆ. ಎಲ್ಲರನ್ನೂ ಸಮಾನವಾಗಿ ತೆಗೆದುಕೊಂಡು ಹೋಗುವ ಶಕ್ತಿ ನಿಮ್ಮಲ್ಲಿದೆ ಎಂದರು.

Vishwa News 24

Recent Posts

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

4 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

4 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

4 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

4 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

5 hours ago

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago