ಬೆಂಗಳೂರು: ನಗರದ ಐಟಿಸಿ ಗಾರ್ಡೇನಿಯಾ ಹೊಟೇಲ್‌ನಲ್ಲಿ ಶುಕ್ರವಾರ ಸಂಜೆ ನಡೆಸಲಾದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ವಿಧಾನಸಭೆಯ ವಿಪಕ್ಷ ನಾಯಕನಾಗಿ ಬಿಜೆಪಿ ಹಿರಿಯ ಶಾಸಕ , ಮಾಜಿ ಡಿಸಿಎಂ ಆರ್.ಅಶೋಕ್ ಅವರನ್ನು ಆಯ್ಕೆ ಮಾಡಲಾಗಿದೆ.
ರಾಜ್ಯಾಧ್ಯಕ್ಷ ಸ್ಥಾನ ಲಿಂಗಾಯತ ಸಮುದಾಯಕ್ಕೆ ಮಣೆ ಹಾಕಿದರೆ, ವಿಪಕ್ಷ ನಾಯಕ ಸ್ಥಾನಕ್ಕೆ ನಿರ್ಣಾಯಕ ಒಕ್ಕಲಿಗ ಸಮುದಾಯಕ್ಕೆ ಮಣೆ ಹಾಕಲಾಗಿದೆ.
ಅಶೋಕ್ ಅವರು ಆರ್ ಎಸ್ ಎಸ್ ಹಿನ್ನಲೆ ಹೊಂದಿದ್ದು, ಈ ಹಿಂದೆ ವಿಧಾನಸಭೆಯ ವಿಪಕ್ಷದ ಉಪನಾಯಕರಾಗಿ (2014-2018), ಉಪಮುಖ್ಯಮಂತ್ರಿಯಾಗಿ, ಕಂದಾಯ, ಗೃಹ ಮತ್ತು ಸಾರಿಗೆ ಸಚಿವರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದು, ಬಿಜೆಪಿ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಿಂದ ಏಳು ಬಾರಿ(ಕ್ಷೇತ್ರ ಮರುವಿಂಗಡಣೆಗೆ ಮುನ್ನ ಮೂರು ಬಾರಿ ಉತ್ತರಹಳ್ಳಿ )ಶಾಸಕರಾಗಿ ಆಯ್ಕೆಯಾಗಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…