ಬೆಂಗಳೂರು : ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸರ್ಕಾರದಲ್ಲಿ ಸಚಿವರಾಗುವುದು ಖಚಿತವಾದ ಹಿನ್ನೆಲೆ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ ಸಲ್ಲಿಸಿದ್ದಾರೆ.
ಲೋಕಭವನದಲ್ಲೇ ಡೆಪ್ಯುಟಿ ಸ್ಪೀಕರ್‌ಗೆ ಖಾದರ್ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲು ಬರುವಂತೆ ನಿಯೋಜಿತ ಸಿಎಂ ಡಿ.ಕೆ. ಶಿವಕುಮಾರ್ ಅವರಿಂದ ಕರೆ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಲೋಕಭವನಕ್ಕೆ ತೆರಳಿ ಗವರ್ನರ್ ಥಾವರ್‌ಚಂದ್ ಗೆಹ್ಲೋಟ್ ಅವರನ್ನ ಭೇಟಿಯಾದ ಯು.ಟಿ. ಖಾದರ್, ರಾಜ್ಯಪಾಲರಿಗೆ ರಾಜೀನಾಮೆ ವಿಷಯ ತಿಳಿಸಿದ್ದಾರೆ. ಜೊತೆಗೆ ಸ್ಪೀಕರ್ ಆಗಿ ಮೂರು ವರ್ಷಗಳ ಅವಧಿಯಲ್ಲಿ ಸಹಕಾರ ನೀಡಿದ್ದಕ್ಕೆ ರಾಜ್ಯಪಾಲರಿಗೆ ಯು.ಟಿ. ಖಾದರ್ ಧನ್ಯವಾದ ತಿಳಿಸಿದ್ದಾರೆ ಎನ್ನಲಾಗಿದೆ.
ಇನ್ನು ಸಚಿವ ಸ್ಥಾನದ ವಿಚಾರವಾಗಿಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ಯಾವುದೇ ಖಾತೆಗೆ ಬೇಡಿಕೆ ಇಟ್ಟಿಲ್ಲ. ಆದರೆ ಆರೋಗ್ಯ ಖಾತೆ ಅಥವಾ ವಸತಿ ಖಾತೆ ಸಿಕ್ಕರೆ ಒಳಿತೆಂಬ ಬಯಕೆ ಇದೆ. ನಾಯಕರು ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ. ಉಪಮುಖ್ಯಮಂತ್ರಿ ಸ್ಥಾನ ಕೊಟ್ಟರೂ ನಿಭಾಯಿಸಲು ತಾನು ಸಿದ್ಧ. ಯಾವ ಬಾಲ್ ಬಂದರೂ ಬ್ಯಾಟಿಂಗ್ ಮಾಡುತ್ತೇವೆ” ಎಂದಿದ್ದಾರೆ.
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…