Featured

ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ ಸಲ್ಲಿಕೆ -vishwanews24

ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ ಸಲ್ಲಿಕೆ

ಬೆಂಗಳೂರು : ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸರ್ಕಾರದಲ್ಲಿ ಸಚಿವರಾಗುವುದು ಖಚಿತವಾದ ಹಿನ್ನೆಲೆ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ ಸಲ್ಲಿಸಿದ್ದಾರೆ.

ಲೋಕಭವನದಲ್ಲೇ ಡೆಪ್ಯುಟಿ ಸ್ಪೀಕರ್‌ಗೆ ಖಾದರ್ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲು ಬರುವಂತೆ ನಿಯೋಜಿತ ಸಿಎಂ ಡಿ.ಕೆ. ಶಿವಕುಮಾರ್ ಅವರಿಂದ ಕರೆ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಲೋಕಭವನಕ್ಕೆ ತೆರಳಿ ಗವರ್ನರ್ ಥಾವರ್‌ಚಂದ್ ಗೆಹ್ಲೋಟ್ ಅವರನ್ನ ಭೇಟಿಯಾದ ಯು.ಟಿ. ಖಾದರ್, ರಾಜ್ಯಪಾಲರಿಗೆ ರಾಜೀನಾಮೆ ವಿಷಯ ತಿಳಿಸಿದ್ದಾರೆ. ಜೊತೆಗೆ ಸ್ಪೀಕರ್ ಆಗಿ ಮೂರು ವರ್ಷಗಳ ಅವಧಿಯಲ್ಲಿ ಸಹಕಾರ ನೀಡಿದ್ದಕ್ಕೆ ರಾಜ್ಯಪಾಲರಿಗೆ ಯು.ಟಿ. ಖಾದರ್ ಧನ್ಯವಾದ ತಿಳಿಸಿದ್ದಾರೆ ಎನ್ನಲಾಗಿದೆ.

ಇನ್ನು ಸಚಿವ ಸ್ಥಾನದ ವಿಚಾರವಾಗಿಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ಯಾವುದೇ ಖಾತೆಗೆ ಬೇಡಿಕೆ ಇಟ್ಟಿಲ್ಲ. ಆದರೆ ಆರೋಗ್ಯ ಖಾತೆ ಅಥವಾ ವಸತಿ ಖಾತೆ ಸಿಕ್ಕರೆ ಒಳಿತೆಂಬ ಬಯಕೆ ಇದೆ. ನಾಯಕರು ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ. ಉಪಮುಖ್ಯಮಂತ್ರಿ ಸ್ಥಾನ ಕೊಟ್ಟರೂ ನಿಭಾಯಿಸಲು ತಾನು ಸಿದ್ಧ. ಯಾವ ಬಾಲ್ ಬಂದರೂ ಬ್ಯಾಟಿಂಗ್ ಮಾಡುತ್ತೇವೆ” ಎಂದಿದ್ದಾರೆ.

Vishwa News 24

Recent Posts

ಕರ್ನಾಟಕವನ್ನ ಯಶಸ್ವಿಯಾಗಿ ಮುನ್ನಡೆಸುತ್ತೀರಿ ಎಂಬ ಅದಮ್ಯ ವಿಶ್ವಾಸ ನನಗಿದೆ : ಡಿಕೆಶಿಗೆ ಸೋನಿಯಾ ಗಾಂಧಿ ಶುಭ ಹಾರೈಕೆ – vishwanews24

ಕರ್ನಾಟಕವನ್ನ ಯಶಸ್ವಿಯಾಗಿ ಮುನ್ನಡೆಸುತ್ತೀರಿ ಎಂಬ ಅದಮ್ಯ ವಿಶ್ವಾಸ ನನಗಿದೆ : ಡಿಕೆಶಿಗೆ ಸೋನಿಯಾ ಗಾಂಧಿ ಶುಭ ಹಾರೈಕೆ ಹೊಸ ಜವಾಬ್ದಾರಿಯನ್ನ…

14 minutes ago

ಡಿ.ಕೆ.ಶಿವಕುಮಾರ್ ಸಿಎಂ : ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ : ಕೆ. ಕೃಷ್ಣಮೂರ್ತಿ ಆಚಾರ್ಯ – vishwanews24

ಡಿ.ಕೆ.ಶಿವಕುಮಾರ್ ಸಿಎಂ : ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ : ಕೆ. ಕೃಷ್ಣಮೂರ್ತಿ ಆಚಾರ್ಯ ಉಡುಪಿ: ಕಾಂಗ್ರೆಸ್…

30 minutes ago

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ -vishwanews24

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಬೆಂಗಳೂರು: ತಳಮಟ್ಟದ ಹೋರಾಟದಿಂದ ಪಕ್ಷವನ್ನು ಕಟ್ಟಿ ಬೆಳೆಸಿದ ಕನಕಪುರ…

46 minutes ago

ರಾಜ್ಯಸಭೆ ಟಿಕೆಟ್ ರೇಸ್‌ : ಪ್ರಮುಖ ಆಕಾಂಕ್ಷಿಗಳ ಪಟ್ಟಿಯಲ್ಲಿ ಕರಾವಳಿಯ ನಾಯಕ ಪ್ರಮೋದ್ ಮಧ್ವರಾಜ್ ..!! vishwanews24

ರಾಜ್ಯಸಭೆ ಟಿಕೆಟ್ ರೇಸ್‌ : ಪ್ರಮುಖ ಆಕಾಂಕ್ಷಿಗಳ ಪಟ್ಟಿಯಲ್ಲಿ ಕರಾವಳಿಯ ನಾಯಕ ಪ್ರಮೋದ್ ಮಧ್ವರಾಜ್ ..!! ಕರಾವಳಿ ಭಾಗದ ರಾಜಕೀಯ…

1 hour ago

ಮೋದಿ ಸರಕಾರಕ್ಕೆ ಯಶಸ್ವೀ 12 ವರ್ಷ: ಜೂ.5ರಿಂದ 21ರವರೆಗೆ ಉಡುಪಿ ಜಿಲ್ಲೆಯಾದ್ಯಂತ ಅಭಿಯಾನ – vishwanews24

ಮೋದಿ ಸರಕಾರಕ್ಕೆ ಯಶಸ್ವೀ 12 ವರ್ಷ: ಜೂ.5ರಿಂದ 21ರವರೆಗೆ ಉಡುಪಿ ಜಿಲ್ಲೆಯಾದ್ಯಂತ ಅಭಿಯಾನ ಉಡುಪಿ : ಪ್ರಧಾನಿ ನರೇಂದ್ರ ಮೋದಿ…

2 hours ago

ಮಂಗಳೂರಿನಿಂದ ಮಂತ್ರಾಲಯಕ್ಕೆ ವಿಶೇಷ ರೈಲು ಆರಂಭ – vishwanews24

ಮಂಗಳೂರಿನಿಂದ ಮಂತ್ರಾಲಯಕ್ಕೆ ವಿಶೇಷ ರೈಲು ಆರಂಭ ಮಂಗಳೂರು : ಜೂನ್ ತಿಂಗಳ ಪ್ರವಾಸ ಮತ್ತು ಉದ್ಯೋಗದ ನಿಮಿತ್ತ ರೈಲುಗಳಲ್ಲಿ ಉಂಟಾಗಿರುವ…

3 hours ago