ಬೆಂಗಳೂರು: ವಿಧಾನಸೌಧದ ಆವರಣದಲ್ಲಿಯೇ ಕೆಂಪೇಗೌಡ ಪ್ರತಿಮೆ ಸ್ಥಾಪನೆ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 513ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಮುಂದಿನ ಕೆಂಪೇಗೌಡ ಜಯಂತಿಯ ಒಳಗಡೆ ಕೆಂಪೇಗೌಡ ಪ್ರತಿಮೆ ಸ್ಥಾಪನೆ ಆಗಲಿದೆ. ವಿಧಾನಸೌಧ ಬೆಂಗಳೂರಿನಲ್ಲೇ ಇರೋದ್ರಿಂದ ಕೆಂಪೇಗೌಡರ ಪ್ರತಿಮೆ ಈ ಮೊದಲೇ ಸ್ಥಾಪನೆ ಆಗಬೇಕಿತ್ತು. ಆ ತಪ್ಪುಗಳನ್ನು ಸರಿಪಡಿಸುತ್ತೇವೆ ಎಂದು ಹೇಳಿದರು.
ಇದೇ ವೇಳೆ ಸಿಎಂ ಅವರು ಮಾಜಿ ಸಿಎಂ ಎಸ್‍ಎಂ ಕೃಷ್ಣ, ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಹಾಗೂ ಬ್ಯಾಂಡ್ಮಿಟನ್ ತಾರೆ ಪ್ರಕಾಶ್ ಪಡುಕೋಣೆ ಈ ಮೂವರಿಗೆ 5 ಲಕ್ಷ ನಗದು, ಪ್ರಶಸ್ತಿ ಫಲಕ ಒಳಗೊಂಡ ನಾಡಪ್ರಭು ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದರು. ನಾರಾಯಣಮೂರ್ತಿ ಪರವಾಗಿ ಪತ್ನಿ ಸುಧಾಮೂರ್ತಿ ಪ್ರಶಸ್ತಿ ಸ್ವೀಕರಿಸಿದರು. ಇತ್ತ ಪ್ರಕಾಶ್ ಪಡುಕೋಣೆ ಪರವಾಗಿ ವಿಮಲ್ ಕುಮಾರ್ ಪ್ರಶಸ್ತಿ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿ, ಚಂದ್ರಶೇಖರ ಸ್ವಾಮೀಜಿ, ಒಕ್ಕಲಿಗ ಮಹಾಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ, ನಂಜಾವಧೂತ ಸ್ವಾಮೀಜಿ, ಸಚಿವರಾದ ಅಶೋಕ್, ಅಶ್ವತ್ಥನಾರಾಯಣ್ ಸೇರಿದಂತೆ ಸಚಿವರು, ಶಾಸಕರು ಭಾಗಿಯಾಗಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…