ಬೆಂಗಳೂರು : ವಿಧಾನಸೌಧದ ನೆಲಮಹಡಿಯಲ್ಲಿರುವ ಸ್ವೀಕೃತಿ ಮತ್ತು ರವಾನೆ ಶಾಖೆಗೆ ಇಂದು ಬೆಳಗ್ಗೆ ಯಡಿಯೂರಪ್ಪ ದಿಢೀರ್ ಭೇಟಿ ನೀಡಿದರು. ಕಚೇರಿಗೆ ಸಿಬ್ಬಂದಿ ಮತ್ತು ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಹಾಜರಾಗಿರದ್ದನ್ನು ಕಂಡು ಹಿರಿಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ..
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭೇಟಿ ಕೊಡುತ್ತಾರೆ ಎಂದಿದ್ದರೇ ಸರಿಯಾದ ಸಮಯಕ್ಕೆ ಸ್ವೀಕೃತಿ ಮತ್ತು ರವಾನೆ ಶಾಖೆಯ ಸಿಬ್ಬಂದಿಗಳು ಹಾಜರಾಗ್ತಾ ಇದ್ದರೇನೋ. ಆದರೇ ಇಂದು ಬೆಳಿಗ್ಗೆ ಸರ್ಕಾರಿ ಕಚೇರಿಯ ಸಮಯಕ್ಕೆ ವಿಧಾನಸೌಧದಲ್ಲಿದ್ದ ಸ್ವೀಕೃತಿ ಮತ್ತು ರವಾನೆ ಶಾಖೆಗೆ ದಿಢೀರ್ ಭೇಟಿ ಕೊಟ್ಟ ಸಿಎಂ ಯಡಿಯೂರಪ್ಪ, ಸಿಬ್ಬಂದಿಗಳು ಟೈಂ ಆಗಿದ್ದರೂ ಬಾರದೇ ಇದ್ದದ್ದನ್ನು ಕಂಡು ಕೆಂಡಾಮಂಡಲರಾದರು.
ಸ್ವೀಕೃತಿ ಮತ್ತು ರವಾನೆ ಶಾಖೆಯಲ್ಲಿಯೇ ಕೆಲವೊತ್ತು ಕುಳಿತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶಾಖೆಯ ಸಿಬ್ಬಂದಿಗಳು ಸರಿಯಾದ ಸಮಯಕ್ಕೆ ಬಾರದೇ ಸಮಯ ಮೀರಿ ಬಂದಿದ್ದನ್ನು ಗಮನಿಸಿ, ಸ್ಥಳದಲ್ಲಿದ್ದ ಮೇಲಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಸಮಯ ಎಷ್ಟು ಆಗಿದೆ ನೋಡಿ.. ಎಲ್ಲಿ ನಿಮ್ಮ ಶಾಖೆಯ ಸಿಬ್ಬಂದಿಗಳು ಇನ್ನೂ ಬಂದಿಲ್ಲ.? ಇದೇನಾ ನಿಮ್ಮ ಇಲಾಖೆಯ ಸಿಬ್ಬಂದಿಗಳು ಕೆಲಸ ಮಾಡುವ ಪರಿ ಎಂದು ಕ್ಲಾಸ್ ತಗೊಂಡರು.
ಇನ್ನೂ ಮುಂದುವರೆದು ಸಿಬ್ಬಂದಿಗಳು ಸಮಯಕ್ಕೆ ಬಾರದೇ ಇದ್ದುದ್ದರಿಂದ ಸಿಟ್ಟುಗೊಂಡ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸರಿಯಾದ ಸಮಯಕ್ಕೆ ಸಿಬ್ಬಂದಿಗಳು ಹಾಜರಿರಬೇಕು. ಇಲ್ಲವಾದಲ್ಲಿ ಅಂತಹ ಸಿಬ್ಬಂದಿಗಳ ಮೇಲೆ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…