ಬೆಂಗಳೂರು: ವಿಧಾನ ಪರಿಷತ್‌ಗೆ ಬಿಜೆಪಿ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿಗೆ ಲಿಂಗಾಯತರ ಕೋಟದಡಿಯಲ್ಲಿ ಪರಿಷತ್ ಟಿಕೆಟ್ ದೊರೆತಿದೆ.
ಹಾಲಿ ಪರಿಷತ್ ಸದಸ್ಯರಾಗಿರುವ ಲಕ್ಷ್ಮಣ ಸವದಿಗೆ ಮತ್ತೊಂದು ಅವಕಾಶ ನೀಡಿರುವ ಹೈಕಮಾಂಡ್, ರಾಜ್ಯ ನಾಯಕರ ಲೆಕ್ಕಾಚಾರವನ್ನು ವರಿಷ್ಠರು ತಲೆಕೆಳಗು ಮಾಡಿದ್ದಾರೆ.
ಮಹಿಳಾ ಕೋಟದಡಿಯಲ್ಲಿ ಕೊಪ್ಪಳ ಮೂಲದ ಲಂಬಾಣಿ ಸಮುದಾಯದ ಹೇಮಲತಾ ನಾಯಕ್, ಹಿಂದುಳಿದ ವರ್ಗ ಕೋಟದಲ್ಲಿ ಪಕ್ಷದ ಕಚೇರಿ ಕಾರ್ಯದರ್ಶಿಯಾಗಿದ್ದ ಕೇಶವ ಪ್ರಸಾದ್, ದಲಿತರ ಕೋಟದಲ್ಲಿ ಎಸ್ಸಿ ಘಟಕದ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅವರಿಗೆ ಟಿಕೆಟ್ ನೀಡಲಾಗಿದೆ.
ಇದೇ ವೇಳೆ ವಿಧಾನ ಪರಿಷತ್‌ನ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿದ್ದು, ಮಾಜಿ ಸಭಾಪತಿ ಬಸವರಾಜ್ ಹೊರಟ್ಟಿಗೆ ಟಿಕೆಟ್ ನೀಡಲಾಗಿದೆ. ಇತ್ತೀಚೆಗೆ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ ಹೊರಟ್ಟಿ ಅವರಿಗೆ ಹೈಕಮಾಂಡ್ ನೀಡಿದ ಭರವಸೆಯಂತೆ ಟಿಕೆಟ್ ದೊರಕಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…