Featured

ವಿಧಾನ ಪರಿಷತ್ ಉಪಚುನಾವಣೆ : ಕಾಂಗ್ರೆಸ್‌ನಿಂದ ಉಡುಪಿ ಜಿಲ್ಲೆಯ ಅಭ್ಯರ್ಥಿ ಕಣಕ್ಕೆ: ಮಂಜುನಾಥ್ ಭಂಡಾರಿ – vishwanews24

ವಿಧಾನ ಪರಿಷತ್ ಉಪಚುನಾವಣೆ : ಕಾಂಗ್ರೆಸ್‌ನಿಂದ ಉಡುಪಿ ಜಿಲ್ಲೆಯ ಅಭ್ಯರ್ಥಿ ಕಣಕ್ಕೆ: ಮಂಜುನಾಥ್ ಭಂಡಾರಿ

ಮಂಗಳೂರು: ಸ್ಥಳೀಯಾಡಳಿತ ಸಂಸ್ಥೆಗಳಿಂದ ರಾಜ್ಯ ವಿಧಾನ ಪರಿಷತ್‌ಗೆ ನಡೆಯುವ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ನಿಂದ ಉಡುಪಿ ಜಿಲ್ಲೆಯ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ ಎಂದು ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಹೇಳಿದ್ದಾರೆ.

ಪಕ್ಷದ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಬಾರಿ ಉಡುಪಿ ಜಿಲ್ಲೆಯ ಅಭ್ಯರ್ಥಿ ಯನ್ನು ಕಾಂಗ್ರೆಸ್ ಕಣಕ್ಕಿಳಿಸಲಿದೆ. ಈ ಪೈಕಿ ಉಡುಪಿಯ ಮಾಜಿ ಜಿಪಂ ಅಧ್ಯಕ್ಷರಾದ ರಾಜು ಪೂಜಾರಿ ಮತ್ತು ಭುಜಂಗ ಶೆಟ್ಟಿ ಹಾಗೂ ಪಕ್ಷದ ಮುಖಂಡ ಕಾರ್ಕಳದ ಟಿ.ಆರ್.ರಾಜು ಸ್ಪರ್ಧಿಸಲು ಉತ್ಸುಕರಾಗಿದ್ದಾರೆ. ಅವರೊಂದಿಗೆ ಇನ್ನೂ ಮೂವರ ಹೆಸರು ಹೈಕಮಾಂಡ್‌ನ ಮುಂದಿದೆ. ಅಂತಿಮವಾಗಿ ಪಕ್ಷದ ಹೈಕಮಾಂಡ್ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ ಎಂದರು.

ಉಭಯ ಜಿಲ್ಲೆಗಳ ಸ್ಥಳೀಯಾಡಳಿತ ಚುನಾಯಿತ ಪ್ರತಿನಿಧಿಗಳ ಪೈಕಿ ಕಾಂಗ್ರೆಸ್‌ಗಿಂತ ಬಿಜೆಪಿಗ ಮತದಾರರ ಸಂಖ್ಯೆ ಅಧಿಕವಿದೆ. ಹಾಗಂತ ಈ ಕ್ಷೇತ್ರವನ್ನು ಸುಲಭದಲ್ಲಿ ಬಿಟ್ಟುಕೊಡುವ ಪ್ರಶ್ನೆಯಿಲ್ಲ. ಗೆಲ್ಲುವ ಅವಕಾಶವನ್ನೂ ಕೈಚೆಲ್ಲುವುದಿಲ್ಲ. ಈಗಾಗಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಚುನಾವಣಾ ತಂತ್ರಗಾರಿಕೆ ನಡೆಸಲಾಗಿದೆ. ಬ್ಲಾಕ್ ಕಾಂಗ್ರೆಸ್, ಜಿಲ್ಲಾ ಕಾಂಗ್ರೆಸ್ ನಾಯಕರ ಜೊತೆ ಚರ್ಚಿಸಿ ಪ್ರಬಲ ಅಭ್ಯರ್ಥಿಯ ಆಯ್ಕೆಗೆ ಅವರು ಸೂಚನೆ ನೀಡಿದ್ದಾರೆ. ಅದರಂತೆ ಕೆಪಿಸಿಸಿಯ ಇನ್ನೋರ್ವ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ಈ ವಾರ ಜಿಲ್ಲೆಗೆ ಅಗಮಿಸಲಿದ್ದಾರೆ. ಈ ಹಿಂದಿನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ, ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಗಳು, ಕಾಂಗ್ರೆಸ್ ಶಾಸಕರು, ಮುಖಂಡರ ಅಭಿಪ್ರಾಯ ಸಂಗ್ರಹಿಸಲಿದ್ದಾರೆ ಎಂದರು.

ಈ ಚುನಾವಣೆಯು ಮುಂದಿನ ಜಿಪಂ ಮತ್ತು ತಾಪಂ ಚುನಾವಣೆಗೂ ದಿಕ್ಸೂಚಿಯಾಗಲಿದೆ. ಹಾಗಾಗಿ ಕಾಂಗ್ರೆಸ್ ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಲಿದೆ.2002ರಲ್ಲಿ ಸ್ಥಳೀಯಾಡಳಿತ ಸಂಸ್ಥೆಗಳ ಮೂಲಕ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಪ್ರತಾಪಚಂದ್ರ ಶೆಟ್ಟಿ ಮತ್ತು ಬ್ಲೇಸಿಯಸ್ ಡಿಸೋಜ ಗೆದ್ದಿದ್ದರು. ಬ್ಲೇಸಿಯಸ್ ಡಿಸೋಜರ ನಿಧನದ ಬಳಿಕ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಗೆಲುವು ಸಾಧಿಸಿ ದ್ದರು. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ನಾನು ಮತ್ತು ಬಿಜೆಪಿಯಿಂದ ಕೋಟ ಶ್ರೀನಿವಾಸ ಪೂಜಾರಿ ಗೆದ್ದಿದ್ದೆವು. ಶ್ರೀನಿವಾಸ ಪೂಜಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾದ ಕಾರಣ ತೆರವಾದ ಆ ಸ್ಥಾನಕ್ಕೆ ಇದೀಗ ನಡೆಯುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ಸಾಧ್ಯತೆಯನ್ನು ಅಲ್ಲಗಳೆಯಲಾಗದು ಎಂದು ಮಂಜುನಾಥ ಭಂಡಾರಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

8 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

11 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

11 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

11 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

11 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

12 hours ago