ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಟಿ.ಎ ಶರವಣ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಸಭೆಯ ಬಳಿಕ ಅಭ್ಯರ್ಥಿ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಯಿತು. ಬಳಿಕ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಅವರ ಜೊತೆಗೆ ಶರವಣ ನಾಮಪತ್ರ ಸಲ್ಲಿಸಿದರು.
ಚುನಾವಣಾಧಿಕಾರಿ ವಿಧಾನಸಭೆ ಕಾರ್ಯದರ್ಶಿ ಎಂಕೆ ವಿಶಾಲಕ್ಷ್ಮಿ ಅವರ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆಯ ಬಳಿಕ ಮಾತನಾಡಿದ ವಿಧಾನ ಪರಿಷತ್ ಜೆಡಿಎಸ್ ಅಭ್ಯರ್ಥಿ ಶರವಣ ಮಾತನಾಡಿ, ಪಕ್ಷ ನಿಷ್ಠೆ ಗಮನ ಹರಿಸಿ ಎರಡನೇ ಬಾರಿ ವಿಧಾನಪರಿಷತ್ ನಲ್ಲಿ ಸೇವೆ ಸಲ್ಲಿಸಲು ಅವಕಾಶ ಕೊಟ್ಟಿದ್ದಾರೆ. ಇದಕ್ಕಾಗಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹಾಗೂ ಎಚ್ ಡಿ ಕುಮಾರಸ್ವಾಮಿ ಧನ್ಯವಾದ ಸಲ್ಲಿಸುತ್ತೇನೆ ಎಂದರು.
ನಾನು ಸಣ್ಣ ಸಮಾಜದಿಂದ ಬಂದಿದ್ದೇನೆ. ಹಾಗಿದ್ದರೂ ಬೆಳೆಯಲು ಅವಕಾಶ ಕೊಟ್ಟಿದ್ದಾರೆ. ನನ್ನ ಜವಾಬ್ದಾರಿ ಇನ್ನಷ್ಟು ಜಾಸ್ತಿಯಾಗಿದೆ. ಕುಮಾರಸ್ವಾಮಿ ಅವರನ್ನು ಮೂರನೇ ಬಾರಿಗೆ ಪಟ್ಟಾಭಿಷೇಕ ಆಗಬೇಕು. ಈ ನಿಟ್ಟಿನಲ್ಲಿ ರಾಜ್ಯ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡುತ್ತೇನೆ ಎಂದರು.
ಬಿಜೆಪಿ ಹಾಗೂ ಕಾಂಗ್ರೆಸ್ ನ್ನು ಜನರು ತಿರಸ್ಕಾರ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಮಳೆಯಿಂದ ಜನರು ತೊಂದರೆ ಒಳಗಾಗುತ್ತಿದ್ದಾರೆ. ಸರ್ಕಾರ ಬಿಬಿಎಂಪಿ ಚುನಾವಣಾ ನಡೆಸದೆ ಅಧಿಕಾರಿಗಳ ಮೂಲಕ ಆಡಳಿತ ನಡೆಸಿ ದುರುಪಯೋಗ ಮಾಡುತ್ತಿದ್ದಾರೆ. ಅಭಿವೃದ್ಧಿ ಹೆಸರಿನಲ್ಲಿ ಲೂಟಿ ಮಾಡುತ್ತಿದ್ದಾರೆ, ಜನರು ಇದನ್ನು ಪ್ರಶ್ನೆ ಮಾಡುತ್ತಿದ್ದಾರೆ . ಬಿಬಿಎಂಪಿ ಚುಕ್ಕಾಣಿ ಹಿಡಿಯಲು ಜೆಡಿಎಸ್ ಸಜ್ಜಾಗಿದೆ ಎಂದರು.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…