Featured

ವಿಧಾನ ಪರಿಷತ್ ಚುನಾವಣೆ : ರಾಷ್ಟ್ರೀಯ ಪಕ್ಷಗಳ ಹಣದ ಅಬ್ಬರದಲ್ಲಿ ಜೆಡಿಎಸ್ ಹಿನ್ನಡೆ ಅನುಭವಿಸಿದೆ  : ಎಚ್‌ಡಿ ಕುಮಾರಸ್ವಾಮಿ – Vishwanews24

ವಿಧಾನ ಪರಿಷತ್ ಚುನಾವಣೆ : ರಾಷ್ಟ್ರೀಯ ಪಕ್ಷಗಳ ಹಣದ ಅಬ್ಬರದಲ್ಲಿ ಜೆಡಿಎಸ್ ಹಿನ್ನಡೆ ಅನುಭವಿಸಿದೆ  : ಎಚ್‌ಡಿ ಕುಮಾರಸ್ವಾಮಿ

ಹಣ ಬಲ ಮತ್ತು ಜನ ಬಲದ ನಡುವಿನ ಹೋರಾಟದಲ್ಲಿ ಜನ ಬಲಕ್ಕೆ ಸೋಲಾಗಿರುವುದು ಬೇಸರ ತಂದಿದೆ..

2023ರ ವಿಧಾನಸಭೆ ಚುನಾವಣೆಯೇ ನಮ್ಮ ಗುರಿ..

ಬೆಂಗಳೂರು: ಹಣ ಬಲ ಮತ್ತು ಜನ ಬಲದ ನಡುವಿನ ಹೋರಾಟದಲ್ಲಿ ಜನ ಬಲಕ್ಕೆ ಸೋಲಾಗಿರುವುದು ಬೇಸರ ತಂದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಿಳಿಸಿದರು.

ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಹೀನಾಯ ಸೋಲನುಭವಿಸಿದರ ಕುರಿತು ಟ್ವೀಟ್ ಮಾಡಿರುವ ಅವರು, ರಾಷ್ಟ್ರೀಯ ಪಕ್ಷಗಳ ಹಣದ ಅಬ್ಬರದಲ್ಲಿ ಜೆಡಿಎಸ್ ಹಿನ್ನಡೆ ಅನುಭವಿಸಿದೆ. ಆಣೆ, ಪ್ರಮಾಣಗಳ ನಡುವೆಯೂ ನೈತಿಕ ನೆಲೆಯಲ್ಲಿ ಸೆಣಸಾಟ ನಡೆಸಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.

ಹಿಂದೆ ಹೇಳಿರುವ ಹಾಗೆ 2023ರ ವಿಧಾನಸಭೆ ಚುನಾವಣೆಯೇ ನಮ್ಮ ಗುರಿ. ಈಗಲೂ ನಾನು ಅದನ್ನೇ ಹೇಳುತ್ತೇನೆ. ಜೊತೆಗೆ ಈ ನಿಟ್ಟಿನಲ್ಲಿ ನಮ್ಮ ತಯಾರಿ ನಡೆದಿದೆ. ಆದರೂ ಈ ಚುನಾವಣೆಯಲ್ಲಿ ಪ್ರಯತ್ನ ಮಾಡಿದ್ದೇವೆ. ದೊಡ್ಡ ಪಕ್ಷಗಳ ಹಣ ಹಂಚಿಕೆ ನಡುವೆ ನಾವು ಹಿಂದೆ ಬಿದ್ದಿದ್ದೇವೆ ಎಂದು ರಾಷ್ಟ್ರೀಯ ಪಕ್ಷಗಳ ವಿರುದ್ಧ ಆರೋಪಿಸಿದರು.

ಚುನಾವಣೆ ಎಂದರೆ ಸೋಲು-ಗೆಲುವು ಸಹಜ. ಗೆಲುವಿಗಾಗಿ ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ. ಅವರೇ ನಮ್ಮ ಶಕ್ತಿ. ಅವರೆಲ್ಲರಿಗೂ ನನ್ನ ಕೃತಜ್ಞತೆಗಳು. ಇನ್ನೂ ಮುಂದೆ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡುತ್ತಿದ್ದೇವೆ. ಹಣಬಲದಿಂದ ಎದುರಾಗುವ ಇಂಥ ಸೋಲುಗಳಿಗೆ ಜೆಡಿಎಸ್ ಎಂದಿಗೂ ಧೃತಿಗೆಡುವುದಿಲ್ಲ ಎಂದು ಅಭಿಮತ ವ್ಯಕ್ತಪಡಿಸಿದರು.

ಈ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಮತದಾರರಾಗಿದ್ದರು. ಆದರಿಂದ ಜೆಡಿಎಸ್ ಸೋಲು ಅನುಭವಿಸಿದೆ. ಆದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜನರೇ ನೇರವಾಗಿ ಹಕ್ಕು ಚಲಾಯಿಸುವುದರಿಂದ ಜೆಡಿಎಸ್ ಶಕ್ತಿ ಏನೆಂಬುದು ತಿಳಿಯಲಿದೆ. ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ. ಜನರಲ್ಲಿ ಜೆಡಿಎಸ್ ಬಗೆಗಿನ ವಿಶ್ವಾಸವನ್ನು ಅಳಿಸಲಾಗದು ಎಂದ ಅವರು ಜಯ ಗಳಿಸಿದ ಎಲ್ಲ ಪಕ್ಷದ ಅಭ್ಯರ್ಥಿಗಳಿಗೂ ಶುಭ ಕೋರಿದರು.

Vishwa News 24

Recent Posts

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ – vishwanews24

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ ಬೆಂಗಳೂರು: ಅದೇನು ಗ್ಯಾಂಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ…

30 minutes ago

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕ – 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ – vishwanews24

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್ 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ ಕಾರ್ಕಳ: ಕಾರ್ಕಳದ…

34 minutes ago

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ – vishwanews24

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ, ಎರಡು ವಾಹನ ವಶ ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ…

42 minutes ago

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ – vishwanews24

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹಲವೆಡೆ ಇಂದು…

48 minutes ago

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

4 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

4 days ago