ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ನೂತನ ಸಭಾ ನಾಯಕರೆಂದು ಹಂಗಾಮಿ ಸಭಾಪತಿ ಪುಟ್ಟಣ್ಣ ಘೋಷಣೆ ಮಾಡಿದ್ದಾರೆ.
ಆ ಬಳಿಕ ಕಲಾಪವನ್ನು ಉದ್ದೇಶಿಸಿ ಮಾತನಾಡಿದ ಯತೀಂದ್ರ ಅವರು, ಮೊದಲ ಬಾರಿ ಸಚಿವನಾಗಿ, ಸಭಾನಾಯಕನಾಗಿ ಆಯ್ಕೆ ಆಗಿದ್ದೇನೆ. ಅನುಭವ ಕಡಿಮೆ ಇರುವ ಕಾರಣ ಏನಾದರೂ ತಪ್ಪಾದರೆ ಸರಿಪಡಿಸಿ ಮಾರ್ಗದರ್ಶನ ನೀಡುವಂತೆ ಆಡಳಿತ ಮತ್ತು ವಿಪಕ್ಷ ಸದಸ್ಯರನ್ನು ಅವರು ಮನವಿ ಮಾಡಿದ್ದಾರೆ.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ. ಈ ಅಧಿವೇಶನದಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ ವಿರುದ್ಧ ಹಲವಾರು ಅಸ್ತ್ರಗಳನ್ನು ಪ್ರಯೋಗಿಸಲು ಎನ್‌ಡಿಎ ಮೈತ್ರಿಕೂಟದ ಬಿಜೆಪಿ ಮತ್ತು ಜೆಡಿಎಸ್ ದೋಸ್ತಿ ಪಕ್ಷಗಳು ರೆಡಿಯಾಗಿವೆ. ಸದನದಲ್ಲಿ ಎರಡೂ ಪಕ್ಷಗಳು ಹಲವಾರು ಪ್ರಮುಖ ವಿಚಾರದಲ್ಲಿ ಡಿಕೆಶಿ ಸರಕಾರದ ವಿರುದ್ಧ ಜಂಟಿಯಾಗಿ ಹೋರಾಡಲು ಸಜ್ಜಾಗಿವೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…