Featured

ವಿನಯ್ ಕುಮಾರ್ ಸೊರಕೆಯವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಲು ಮೆಲ್ವಿನ್ ಡಿಸೋಜ ಆಗ್ರಹ – vishwanews24

ವಿನಯ್ ಕುಮಾರ್ ಸೊರಕೆಯವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಲು ಮೆಲ್ವಿನ್ ಡಿಸೋಜ ಆಗ್ರಹ

ಉಡುಪಿ: ಕರ್ನಾಟಕ ರಾಜ್ಯದಲ್ಲಿ ಜೂನ್ 13 ರಂದು ವಿಧಾನಪರಿಷತ್ನ 11 ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ವಿನಯ್ ಕುಮಾರ್ ಸೊರಕೆಯವರಿಗೆ ಅವಕಾಶ ನೀಡಿ ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಬೇಕು ಎಂದು ಶಿರ್ವ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ನ್ಯಾಯವಾದಿ ಮೆಲ್ವಿನ್ ಡಿಸೋಜ ಆಗ್ರಹಿಸಿದ್ದಾರೆ.

ವಿನಯ್ ಕುಮಾರ್ ಸೊರಕೆಯವರು ಪಕ್ಷದ ತತ್ವ ಸಿದ್ದಾಂತಗಳಿಗೆ ಬದ್ಧರಾಗಿ ಗೆದ್ದರೂ, ಸೋತರೂ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡು ಉಡುಪಿ ಜಿಲ್ಲೆಯಲ್ಲಿ ಪಕ್ಷದ ಕಾರ್ಯಕರ್ತರ ಧ್ವನಿಯಾಗಿ ನಿಂತವರು. ಅದೇ ರೀತಿಯಲ್ಲಿ ಕಾಪು ಕ್ಷೇತ್ರದಲ್ಲಿ ಶಾಸಕರಾಗಿ ಮತ್ತು ಸಚಿವರಾಗಿ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳು ಕಾರ್ಯಕರ್ತರ ಮನಸ್ಸಿನಲ್ಲಿ ಅಚ್ಚಳಿಯದಂತೆ ಉಳಿದಿವೆ.

 

ಉಡುಪಿ ಜಿಲ್ಲೆಯಲ್ಲಿ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ 5 ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಸೋಲು ಅನುಭವಿಸಿದರೂ ವಿನಯ್ ಕುಮಾರ್ ಸೊರಕೆಯವರು ಕಾರ್ಯಕರ್ತರ ಪರ ನಿಂತು ಅವರ ಎಲ್ಲ ಕೆಲಸಕಾರ್ಯ ಮತ್ತು ಕಷ್ಟಗಳಿಗೆ ಜೊತೆಯಾಗಿ ನಿಂತು ಪಕ್ಷ ನಿಷ್ಠೆಯಿಂದ ಕೆಲಸ ಮಾಡಿಕೊಂಡು ಬಂದಿರುತ್ತಾರೆ. ಜಿಲ್ಲೆಯ ಪಕ್ಷದ ಎಲ್ಲ ಕೆಲಸ ಕಾರ್ಯಗಳಲ್ಲಿ ಜಿಲ್ಲಾ ಕಾಂಗ್ರೆಸ್ಗೆ ಸದಾ ಬೆನ್ನೆಲುಬಾಗಿ ನಿಂತಿದ್ದಾರೆ. ಹಾಗೂ ಇತ್ತೀಚೆಗೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಪಕ್ಷ ನೀಡಿದ ಜವಾಬ್ದಾರಿಯನ್ನು ರಾಜ್ಯಾದ್ಯಾಂತ ಸಂಚರಿಸಿ ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಈ ಹಿಂದೆ ಕೂಡಾ ಪಕ್ಷದಲ್ಲಿ ಹಲವಾರು ಹುದ್ದೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ.

ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು ಇಲ್ಲದೇ ಇರುವ ಈ ಸಂದರ್ಭದಲ್ಲಿ ಶ್ರೀ ವಿನಯ್ ಕುಮಾರ್ ಸೊರಕೆಯವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿದಲ್ಲಿ ಕಾರ್ಯಕರ್ತರಲ್ಲಿ ಹೊಸ ಹುರುಪು ಬರಲಿದೆ ಮತ್ತು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆ ಮಾಡಲು ಶಕ್ತಿ ಬಂದಂತಾಗುತ್ತದೆ. ಆದುದರಿಂದ ನಮ್ಮ ರಾಜ್ಯ ನಾಯಕರು ಇದನ್ನು ಮನಗಂಡು ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆಯವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿ ಅವರು ಕಾಂಗ್ರೆಸ್ ಪಕ್ಷಕ್ಕೆ ನೀಡಿದ ಸೇವೆಗೆ ಮನ್ನಣೆ ನೀಡಬೇಕೆಂದು ಮೆಲ್ವಿನ್ ಡಿಸೋಜ ರವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

2 days ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

3 days ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

3 days ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

3 days ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

4 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

4 days ago