ಉಡುಪಿ : ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಪದ್ಮ ಬಾಯಿ ಎಂಬವರ ಮನೆಯನ್ನು ಯಾವುದೇ ನೋಟಿಸ್ ನೀಡದೆ ತೆರವುಗೊಳಿಸಿರುವ ಪಿಡಿಓ ನ ಜನವಿರೋಧಿ ನಡೆಯ ವಿರುದ್ಧ ಇಂದು ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರೊಂದಿಗೆ ಪಿಡಿಓ ನಡೆದುಕೊಂಡ ವರ್ತನೆಯನ್ನು ಉಡುಪಿ ಜಿಲ್ಲಾ ಯುವಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ.
ಘಟನೆಯನ್ನು ಖಂಡಿಸಿ ಪ್ರತಿಕ್ರಿಯೆ ನೀಡಿರುವ ಉಡುಪಿ ಜಿಲ್ಲಾ ಯುವಕಾಂಗ್ರೆಸ್‍ನ ಜಿಲ್ಲಾಧ್ಯಕ್ಷ ದೀಪಕ್ ಕೋಟ್ಯಾನ್ ಇನ್ನಾ ಅವರು, ಘಟನೆಯ ಕುರಿತು ತನಿಖೆ ನಡೆಸಿ ತಪ್ಪಿತಸ್ಥ ಪಿಡಿಓ ಅವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಮಹಿಳೆ ಅಕ್ರಮ ಸಕ್ರಮದಲ್ಲಿ ಮನೆ ನಿರ್ಮಿಸಿದ್ದು ಈ ಮನೆಯ ಸಕ್ರಮಕ್ಕೆ ಸಂಬಂಧಿಸಿದ ವ್ಯಾಜ್ಯ ನ್ಯಾಯಾಲಯದಲ್ಲಿ ಬಾಕಿ ಇರುವಾಗಲೇ ಮಹಿಳೆಯ ಮನೆಯನ್ನು ದ್ವಂಸ ಗೊಳಿಸಿದ್ದಾರೆ. ಅಲ್ಲದೆ ಈ ಬಗ್ಗೆ ಮನವಿ ಸಲ್ಲಿಸಲು ಬಂದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರೊಂದಿಗೆ ನಡೆದುಕೊಂಡ ರೀತಿ ಖಂಡಿಸುವಂತಹದ್ದು ಎಂದಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…