ಬೆಂಗಳೂರು: ಸುಳ್ಳು ಸ್ಲೋಗನ್ʼಗಳ ಸೃಷ್ಟಿಕರ್ತ, ಟರ್ಮಿನೇಟರ್, ಸಿದ್ದಕಲೆಯ ನಿಪುಣಾಗ್ರೇಸರು ಈಗ ʼಜೆಡಿಎಫ್ʼ ಎಂಬ ಹೊಸ ಜಪ ಮಾಡಿಕೊಂಡು ತಮ್ಮ ಜಾತ್ಯತೀತ ತತ್ವಾದರ್ಶಗಳಿಗೆ ಮಂಡ್ಯದಲ್ಲಿ ಎಳ್ಳೂನೀರು ಬಿಟ್ಟಿದ್ದಾರೆ ಎಂದು ವಿಪಕ್ಷ ನಾಯ ಸಿದ್ದರಾಮಯ್ಯ ವಿರುದ್ದ ಮಾಜಿ ಸಿಎ ಹೆಚ್ ಡಿ ಕುಮಾರಸ್ವಾಮಿ ಅವರು ಹರಿಹಾಯ್ದಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಸುಳ್ಳು ಸ್ಲೋಗನ್ʼಗಳ ಸೃಷ್ಟಿಕರ್ತ, ಟರ್ಮಿನೇಟರ್, ಸಿದ್ದಕಲೆಯ ನಿಪುಣಾಗ್ರೇಸರು ಈಗ ʼಜೆಡಿಎಫ್ʼ ಎಂಬ ಹೊಸ ಜಪ ಮಾಡಿಕೊಂಡು ತಮ್ಮ ಜಾತ್ಯತೀತ ತತ್ವಾದರ್ಶಗಳಿಗೆ ಮಂಡ್ಯದಲ್ಲಿ ಎಳ್ಳೂನೀರು ಬಿಟ್ಟಿದ್ದಾರೆ. ಸಹಕಾರ ಸಚಿವರ ಸಹಾಯಕನನ್ನು ಗೆಲ್ಲಿಸಿಕೊಳ್ಳಲು ʼಜಾತಿ ಸಹಕಾರʼಕ್ಕೆ ಮೊರೆ ಹೋಗಿದ್ದಾರೆ!! ಅಯ್ಯೋ, ಎಂಥಾ ದುರ್ವಿಧಿ ಎಂದು ಟೀಕಿಸಿದ್ದಾರೆ.
“ಮತಫಸಲಿಗಾಗಿ ಜಾತಿ ರಾಜಕೀಯ ಮಾಡುತ್ತಿರುವ ನಕಲಿ ಜಾತ್ಯತೀತ ಶೂರನ ಅಸಲಿರೂಪ ಕಳಚಿದೆ. ಸಮುದಾಯದ ಅಧ್ಯಕ್ಷರೊಬ್ಬರು, ನೀವು ಮತ ಹಾಕುವುದು ಕಾಂಗ್ರೆಸ್ ಪಕ್ಷಕ್ಕಲ್ಲ, ನಮ್ಮ ಸಮುದಾಯದ ಸಿದ್ದಕಲಾಕೋವಿದನಿಗೆ ಎಂದು ಮನೆಮನೆಗೂ ಹೋಗಿ ಪ್ರಚಾರ ಮಾಡುತ್ತಿರುವುದು ಮಂಡ್ಯದಲ್ಲಿ ಮಜಭೂತಾಗಿ ನಡೆಯುತ್ತಿದೆ. ಹೇಳುವುದು ಒಂದು, ಮಾಡುವುದು ಇನ್ನೊಂದು” ಎಂದಿದ್ದಾರೆ.
ಜಾತ್ಯತೀತತೆಯ ಜಗಜಟ್ಟಿ ಮೈಸೂರಿನಲ್ಲಿ ಮಾಡಿದ ಜಾತಿ ರಾಜಕಾರಣ ಗೊತ್ತಿದೆ. ʼಸಂದೇಶ ಸನ್ನಿಧಿʼಯಲ್ಲಿ ಕೂತು ಕಾಂಗ್ರೆಸ್ ಮತದಾರರ 2ನೇ ಪ್ರಾಶಸ್ತ್ಯದ ಮತಗಳು ಬಿಜೆಪಿಗೇ ಹೋಗಬೇಕು, ಜೆಡಿಎಸ್ʼಗಲ್ಲ ಎಂದು ಫರ್ಮಾನು ಹೊರಡಿಸಿದ ʼಚಾಮುಂಡೇಶ್ವರಿ ಕ್ಷೇತ್ರ ತಿರಸ್ಕೃತʼ ಸುಳ್ಳು ಸ್ಲೋಗನ್ʼಗಳ ಸೃಷ್ಟಿಕರ್ತನ ನಾಟಕದ ಪರದೆ ಜಾರಿಬಿದ್ದಿದೆ ಎಂದು ಹೇಳಿದ್ದಾರೆ.
ರಾಜಕೀಯ ಆರಂಭಿಸಿದ ಮಾತೃಪಕ್ಷವನ್ನೇ ಕ್ರೂರವಾಗಿ ಮುಳುಗಿಸಲು ಹೊರಟ ಆ ನಾಯಕರು, ಕೈ ಹಿಡಿದ ಸ್ವಪಕ್ಷವನ್ನೂ ಸ್ವಾಹಾ ಮಾಡುತ್ತಿದ್ದಾರೆ. ʼವಿನಾಶಕಾಲೇ ವಿಪರೀತ ಸುಳ್ಳುʼ. ಆ ಸುಳ್ಳುಗಳೇ ಅವರನ್ನು ಸುಡುತ್ತವೆ. ಆಟ ಈಗ ಆರಂಭ ಎಂದಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…