Featured

ವಿನಾಶಕಾಲೇ ವಿಪರೀತ ಸುಳ್ಳು, ಆ ಸುಳ್ಳುಗಳೇ ಅವರನ್ನು ಸುಡುತ್ತವೆ : ಸಿದ್ದರಾಮಯ್ಯ ವಿರುದ್ದ  ಹೆಚ್‌ ಡಿ ಕುಮಾರಸ್ವಾಮಿ – Vishwanews24

ವಿನಾಶಕಾಲೇ ವಿಪರೀತ ಸುಳ್ಳು, ಆ ಸುಳ್ಳುಗಳೇ ಅವರನ್ನು ಸುಡುತ್ತವೆ : ಸಿದ್ದರಾಮಯ್ಯ ವಿರುದ್ದ  ಹೆಚ್‌ ಡಿ ಕುಮಾರಸ್ವಾಮಿ – Vishwanews24

ಬೆಂಗಳೂರು: ಸುಳ್ಳು ಸ್ಲೋಗನ್‌ʼಗಳ ಸೃಷ್ಟಿಕರ್ತ, ಟರ್ಮಿನೇಟರ್‌, ಸಿದ್ದಕಲೆಯ ನಿಪುಣಾಗ್ರೇಸರು ಈಗ ʼಜೆಡಿಎಫ್‌‌ʼ ಎಂಬ ಹೊಸ ಜಪ ಮಾಡಿಕೊಂಡು ತಮ್ಮ ಜಾತ್ಯತೀತ ತತ್ವಾದರ್ಶಗಳಿಗೆ ಮಂಡ್ಯದಲ್ಲಿ ಎಳ್ಳೂನೀರು ಬಿಟ್ಟಿದ್ದಾರೆ ಎಂದು ವಿಪಕ್ಷ ನಾಯ ಸಿದ್ದರಾಮಯ್ಯ ವಿರುದ್ದ ಮಾಜಿ ಸಿಎ ಹೆಚ್‌ ಡಿ ಕುಮಾರಸ್ವಾಮಿ ಅವರು ಹರಿಹಾಯ್ದಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಸುಳ್ಳು ಸ್ಲೋಗನ್‌ʼಗಳ ಸೃಷ್ಟಿಕರ್ತ, ಟರ್ಮಿನೇಟರ್‌, ಸಿದ್ದಕಲೆಯ ನಿಪುಣಾಗ್ರೇಸರು ಈಗ ʼಜೆಡಿಎಫ್‌‌ʼ ಎಂಬ ಹೊಸ ಜಪ ಮಾಡಿಕೊಂಡು ತಮ್ಮ ಜಾತ್ಯತೀತ ತತ್ವಾದರ್ಶಗಳಿಗೆ ಮಂಡ್ಯದಲ್ಲಿ ಎಳ್ಳೂನೀರು ಬಿಟ್ಟಿದ್ದಾರೆ. ಸಹಕಾರ ಸಚಿವರ ಸಹಾಯಕನನ್ನು ಗೆಲ್ಲಿಸಿಕೊಳ್ಳಲು ʼಜಾತಿ ಸಹಕಾರʼಕ್ಕೆ ಮೊರೆ ಹೋಗಿದ್ದಾರೆ!! ಅಯ್ಯೋ, ಎಂಥಾ ದುರ್ವಿಧಿ ಎಂದು ಟೀಕಿಸಿದ್ದಾರೆ.

“ಮತಫಸಲಿಗಾಗಿ ಜಾತಿ ರಾಜಕೀಯ ಮಾಡುತ್ತಿರುವ ನಕಲಿ ಜಾತ್ಯತೀತ ಶೂರನ ಅಸಲಿರೂಪ ಕಳಚಿದೆ. ಸಮುದಾಯದ ಅಧ್ಯಕ್ಷರೊಬ್ಬರು, ನೀವು ಮತ ಹಾಕುವುದು ಕಾಂಗ್ರೆಸ್‌ ಪಕ್ಷಕ್ಕಲ್ಲ, ನಮ್ಮ ಸಮುದಾಯದ ಸಿದ್ದಕಲಾಕೋವಿದನಿಗೆ ಎಂದು ಮನೆಮನೆಗೂ ಹೋಗಿ ಪ್ರಚಾರ ಮಾಡುತ್ತಿರುವುದು ಮಂಡ್ಯದಲ್ಲಿ ಮಜಭೂತಾಗಿ ನಡೆಯುತ್ತಿದೆ. ಹೇಳುವುದು ಒಂದು, ಮಾಡುವುದು ಇನ್ನೊಂದು” ಎಂದಿದ್ದಾರೆ.

ಜಾತ್ಯತೀತತೆಯ ಜಗಜಟ್ಟಿ ಮೈಸೂರಿನಲ್ಲಿ ಮಾಡಿದ ಜಾತಿ ರಾಜಕಾರಣ ಗೊತ್ತಿದೆ. ʼಸಂದೇಶ ಸನ್ನಿಧಿʼಯಲ್ಲಿ ಕೂತು ಕಾಂಗ್ರೆಸ್‌ ಮತದಾರರ 2ನೇ ಪ್ರಾಶಸ್ತ್ಯದ ಮತಗಳು ಬಿಜೆಪಿಗೇ ಹೋಗಬೇಕು, ಜೆಡಿಎಸ್‌ʼಗಲ್ಲ ಎಂದು ಫರ್ಮಾನು ಹೊರಡಿಸಿದ ʼಚಾಮುಂಡೇಶ್ವರಿ ಕ್ಷೇತ್ರ ತಿರಸ್ಕೃತʼ ಸುಳ್ಳು ಸ್ಲೋಗನ್‌ʼಗಳ ಸೃಷ್ಟಿಕರ್ತನ ನಾಟಕದ ಪರದೆ ಜಾರಿಬಿದ್ದಿದೆ ಎಂದು ಹೇಳಿದ್ದಾರೆ.

ರಾಜಕೀಯ ಆರಂಭಿಸಿದ ಮಾತೃಪಕ್ಷವನ್ನೇ ಕ್ರೂರವಾಗಿ ಮುಳುಗಿಸಲು ಹೊರಟ ಆ ನಾಯಕರು, ಕೈ ಹಿಡಿದ ಸ್ವಪಕ್ಷವನ್ನೂ ಸ್ವಾಹಾ ಮಾಡುತ್ತಿದ್ದಾರೆ. ʼವಿನಾಶಕಾಲೇ ವಿಪರೀತ ಸುಳ್ಳುʼ. ಆ ಸುಳ್ಳುಗಳೇ ಅವರನ್ನು ಸುಡುತ್ತವೆ. ಆಟ ಈಗ ಆರಂಭ ಎಂದಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

11 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

11 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

15 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

15 hours ago