ಬೆಂಗಳೂರು: ವಿಪಕ್ಷಗಳಿಗೆ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡದೇ ಆಕ್ರೋಶಕ್ಕೆ ಕಾರಣವಾಗಿದ್ದ ಸಿಎಂ ಸಿದ್ದರಾಮಯ್ಯ ಕೊನೆಗೂ ವಿಪಕ್ಷಗಳಿಗೆ ಅನುದಾನ ರಿಲೀಸ್ ಮಾಡಿದ್ದಾರೆ. ಪ್ರತಿ ವಿಧಾನಸಭೆ ಕ್ಷೇತ್ರಕ್ಕೆ ತಲಾ 25 ಕೋಟಿಯಂತೆ ಅನುದಾನ ರಿಲೀಸ್ ಮಾಡಲು ಸಿಎಂ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
ಸಿಎಂ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಹಣ ಬಿಡುಗಡೆ ಮಾಡಲಾಗುತ್ತಿದೆ. ಹಿಂದೆ ಕಾಂಗ್ರೆಸ್ ಶಾಸಕರಿಗೆ ಮಾತ್ರ 50 ಕೋಟಿ ರೂ. ಅನುದಾನ ಸಿಎಂ ರಿಲೀಸ್ ಮಾಡಿದ್ದರು. ಇದು ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಅಧಿವೇಶನದಲ್ಲಿ ಈ ಬಗ್ಗೆ ವಿಪಕ್ಷಗಳು ವಿರೋಧ ಮಾಡಿದ್ದವು. ಇದೀಗ ವಿಪಕ್ಷಗಳ ಶಾಸಕರಿಗೂ ಸಿಎಂ ಅನುದಾನ ಬಿಡುಗಡೆ ಮಾಡಿದ್ದಾರೆ.
ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಅಡಿ ಬರುವ ರಸ್ತೆ, ಸೇತುವೆ ಹಾಗೂ ನಗರಾಭಿವೃದ್ಧಿ ಇಲಾಖೆ ಅಡಿ ಬರೋ ನಗರ ಪ್ರದೇಶ ಕಾಮಗಾರಿಗಳಿಗೆ 18.75 ಕೋಟಿ ರೂ. ಬಿಡುಗಡೆ ಹಾಗೂ ವಿವೇಚನಾಧಿಕಾರದಡಿ ವಿಧಾನಸಭೆ ಸದಸ್ಯರು ಆಯ್ಕೆ ಮಾಡಬಹುದಾದ ಇತರ ಇಲಾಖೆ ಕಾಮಗಾರಿಗಳಿಗೆ 6.25 ಕೋಟಿ ರೂ. ಬಿಡುಗಡೆ ಸೇರಿ ಒಟ್ಟು 25 ಕೋಟಿ ರೂ. ಅನುದಾನ ಬಿಡುಗಡೆಗೆ ಸಿಎಂ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…