ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತನ್ನ ಅಧಿಕಾರದ ಕೊನೆಯ ವರ್ಷದಲ್ಲಿ ಇದ್ದು, ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ನೇತೃತ್ವದಲ್ಲಿ ಮುಂಬರುವ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಹಿನ್ನೆಲೆಯಲ್ಲೇ ವಿರೋಧ ಪಕ್ಷಗಳು ತಮ್ಮ ತಯಾರಿ ಚಟುವಟಿಕೆಯನ್ನು ತೀವ್ರಗೊಳಿಸಿದೆ. ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ, ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ದೆಹಲಿಯ ಭೇಟಿ ಮಾಡಿದ್ದು, ನಾನು ಪ್ರಧಾನಿ ರೇಸ್ನಲ್ಲಿಲ್ಲ ಎಂದು ತಿಳಿಸಿದ್ದಾರೆ ಮತ್ತು ಕಾಂಗ್ರೆಸ್ ಪಕ್ಷದ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿ ಆದರೆ ತಮ್ಮ ಬೆಂಬಲಿ ಇದೆ ಎಂದು ಪರೋಕ್ಷವಾಗಿ ಹೇಳಿದ್ದಾರೆ.
ಅಸ್ಸಾಂ ಎನ್ಸಿಆರ್ ಬಿಲ್ ಸೇರಿದಂತೆ 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಕುರಿತು ಚರ್ಚಿಸಿದೆವು. ಕೇಂದ್ರ ಸರ್ಕಾರಕ್ಕೆ ಮುಂದಿನ ಚುನಾವಣೆಯಲ್ಲಿ ತನ್ನ ಅಧಿಕಾರವನ್ನು ಉಳಿಸಿಕೊಳ್ಳುವುದೇ ಚಿಂತೆಯಾಗಿದೆ. ವಿಪಕ್ಷಗಳು ಒಗ್ಗಟ್ಟಾಗಿದ್ದು, ಬಿಜೆಪಿಯನ್ನು ಸೋಲಿಸುತ್ತೇವೆ ಎಂದು ಮಮತಾ ಬ್ಯಾನರ್ಜಿ ವಿಶ್ವಾಸ ವ್ಯಕ್ತಪಡಿಸಿದರು. ಸೋನಿಯಾ ಗಾಂಧಿ ಅವರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತಾಡಿದ ಸಿಎಂ ಮಮತಾ ಬ್ಯಾನರ್ಜಿ ಅವರು, ಕಾಂಗ್ರೆಸ್ನೊಂದಿಗೆ ಹಲವು ವರ್ಷಗಳಿಂದ ಒಳ್ಳೆಯ ಸಂಬಂಧ ಹೊಂದಿದ್ದೇನೆ. ನಾವು ಮುಂದಿನ ರಾಜಕೀಯ, ಎನ್ಸಿಆರ್ ಬಿಲ್ ಸೇರಿದಂತೆ ಹೇಗೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕು ಎನ್ನುವ ಕುರಿತು ಚರ್ಚಿಸಿದ್ದೇವೆ ಎಂದರು..
ಮಮತಾ ಬ್ಯಾನರ್ಜಿ ಹೋರಾಟಕ್ಕೆ ಎಚ್‍ಡಿಡಿ ಬೆಂಬಲ:
ತೃತೀಯ ರಂಗದ ಸಾರಥ್ಯ ಹೊತ್ತಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಮಾಜಿ ಪ್ರಧಾನಿ ದೇವಗೌಡರನ್ನು ಇಲ್ಲಿನ ಕರ್ನಾಟಕ ಭವನದಲ್ಲಿ ಭೇಟಿಮಾಡಿದ್ದಾರೆ.
ಮಾಜಿ ಪ್ರಧಾನಿ ದೇವೇಗೌಡರನ್ನು ಮಮತಾ ಬ್ಯಾನರ್ಜಿಯವರು ಕರ್ನಾಟಕ ಭವನದಲ್ಲಿ ಭೇಟಿಯಾಗಿ ಒಂದು ಗಂಟೆಗೂ ಅಧಿಕ ಕಾಲ ಮಾತುಕತೆ ನಡೆಸಿದ್ದಾರೆ. ಅಸ್ಸಾಂ ಸರ್ಕಾರದ ಎನ್‌ಆರ್‌ಸಿ ಕರಡು ವಿರೋಧಿಸುತ್ತಿರುವ ಮಮತಾ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡಿದ್ದು, ಮಮತಾ ಬ್ಯಾನರ್ಜಿಯವರ ಮನವಿಗೆ ಒಪ್ಪಿಕೊಂಡ ದೇವೇಗೌಡರು ಬೆಂಬಲ ಸೂಚಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…