ಬೆಂಗಳೂರು : ಕೆಂಪೇಗೌಡ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟದಲ್ಲಿ ಬುಧವಾರವೂ ಭಾರಿ ವ್ಯತ್ಯಯ ಉಂಟಾಗಿದೆ. ಒಟ್ಟು 142 ಇಂಡಿಗೋ ವಿಮಾನಗಳ ಸಂಚಾರದಲ್ಲಿ ಅಡಚಣೆ ಉಂಟಾಗಿದ್ದು, ಆ ಪೈಕಿ ಕೆಲವು ವಿಳಂಬವಾದರೆ ಇನ್ನು ಕೆಲವು ವಿಮಾನಗಳು ರದ್ದಾಗಿವೆ. ಕಳೆದ ತಿಂಗಳಿಂದ ಜಾರಿಯಾಗಿರುವ ಫ್ಲೈಟ್ ಡ್ಯೂಟಿ ಟೈಮ್ ಲಿಮಿಟೇಷನ್ಸ್ ಹಿನ್ನೆಲೆ ಪೈಲಟ್‌ಗಳು ಮತ್ತು ಸಿಬ್ಬಂದಿ ಡ್ಯೂಟಿಗೆ ಹಾಜರಾಗದಿರುವುದೇ ಹೆಚ್ಚಿನ ವ್ಯತ್ಯಯಗಳಿಗೆ ಕಾರಣ ಎನ್ನಲಾಗಿದೆ.
ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (BIAL)ನ ಮೂಲಗಳ ಪ್ರಕಾರ, ಇಂಡಿಗೋ ಸಂಸ್ಥೆಯ ಒಟ್ಟು 42 ವಿಮಾನಗಳು ರದ್ದುಗೊಂಡಿವೆ. ಬೆಂಗಳೂರಿಗೆ ಬರಬೇಕಾಗಿದ್ದ ಒಂದು ವಿಮಾನದ ಮಾರ್ಗ ಬದಲಾಯಿಸಲಾಗಿದೆ. ಇನ್ನು, ಪೈಲಟ್‌ಗಳು ಕರ್ತವ್ಯಕ್ಕೆ ಹಾಜರಾಗದೆ ಇರುವ ಬಗ್ಗೆ ವರದಿಗಳು ಹರಿದಾಡುತ್ತಿದ್ದಂತೆ, ಇಂಡಿಗೋ ಸಂಸ್ಥೆ ಪ್ರಕಟಣೆ ಹೊರಡಿಸಿದೆ. ಕಳೆದ ಎರಡು ದಿನಗಳಿಂದ ಇಂಡಿಗೋ ವಿಮಾನಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಿದೆ ಎಂಬುದನ್ನು ನಾವು ಒಪ್ಪಿಕೊಳ್ಳುತ್ತೇವೆ. ಪ್ರಯಾಣಿಕರಿಗೆ ಉಂಟಾದ ಅಸೌಕರ್ಯಕ್ಕೆ ಕ್ಷಮೆಯಾಚಿಸುತ್ತೇವೆ ಎಂದು ತಿಳಿಸಿದೆ.
ಅನಿರೀಕ್ಷಿತ ಕಾರ್ಯಾಚರಣಾ ಸವಾಲುಗಳು, ಸಣ್ಣ ತಾಂತ್ರಿಕ ದೋಷ, ಚಳಿಗಾಲದ ವೇಳಾಪಟ್ಟಿ ಬದಲಾವಣೆ, ಹವಾಮಾನ ವೈಪರೀತ್ಯ, ವಿಮಾನಯಾನ ವ್ಯವಸ್ಥೆಯ ಹೆಚ್ಚಿದ ವಾಹನ ದಟ್ಟಣೆ ಮತ್ತು ನವೀಕರಿಸಿದ ಫ್ಲೈಟ್ ಡ್ಯೂಟಿ ಟೈಮ್ ಲಿಮಿಟೇಷನ್ ಜಾರಿ ಸೇರಿ ಕೆಲ ವಿಷಯಗಳು ನಮ್ಮ ವಿಮಾನಗಳ ಕಾರ್ಯಾಚರಣೆಯ ಮೇಲೆ ಪ್ರಭಾವ ಬೀರಿವೆ. ಅರ್ಹ ಪ್ರಯಾಣಿಕರಿಗೆ ಹಣ ಮರುಪಾವತಿ ಮಾಡಲಾಗುತ್ತದೆ ಅಥವಾ ಪರ್ಯಾಯ ವಿಮಾನಗಳನ್ನು ಒದಗಿಸಲಾಗುತ್ತದೆ ಎಂದು ಸಂಸ್ಥೆ ತಿಳಿಸಿದೆ.
ಏರ್ ಇಂಡಿಯಾ ವಿಮಾನಗಳ ಸಂಚಾರದಲ್ಲೂ ವ್ಯತ್ಯಯ
ಮಾಹಿತಿ ಪ್ರಕಾರ, ಬುಧವಾರ ಏರ್ ಇಂಡಿಯಾ ಎಕ್ಸ್ಪ್ರೆಸ್ನ 38 ವಿಮಾನಗಳ ಹಾರಾಟದಲ್ಲೂ ವ್ಯತ್ಯಯವಾಗಿದೆ. ವಿಮಾನದಲ್ಲಿ ಕೆಲ ಸಮಸ್ಯೆಗಳನ್ನು ಸಿಬ್ಬಂದಿ ಗಮನಿಸಿದ ಕಾರಣ ಮಂಗಳವಾರ ಮೂರು ವಿಮಾನಗಳು ಒಂದು ಗಂಟೆಗೂ ಹೆಚ್ಚು ತಡವಾಗಿ ಸಂಚರಿಸಿದ್ದವು. ವಿಮಾನಗಳನ್ನು ಗೇಟ್‌ಗೆ ಹಿಂದಕ್ಕೆ ಕರೆಸಿ ನಿರ್ವಹಣಾ ಸಿಬ್ಬಂದಿ ಪರಿಶೀಲನೆ ನಡೆಸಿ, ಬಳಿಕ ಸಂಚಾರಕ್ಕೆ ಅನುಮತಿ ನೀಡಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…