ವಿಮಾನ ದುರಂತಕ್ಕೆ 8 ವರ್ಷ : ಶ್ರದ್ಧಾಂಜಲಿ ಅರ್ಪಣೆ
ಮಂಗಳೂರು : ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬಜ್ಪೆಯ ಕೆಂಜಾರಿನಲ್ಲಿ ಸಂಭವಿಸಿದ ವಿಮಾನ ದುರಂತಕ್ಕೆ ಇಂದು 8 ವರ್ಷ. ಈ ಹಿನ್ನೆಲೆಯಲ್ಲಿ ದುರಂತದ ವಾರ್ಷಿಕ ಸ್ಮರಣಾರ್ಥ ಮಡಿದವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವು ನಗರ ಹೊರವಲಯದ ಕೂಳೂರು ಸೇತುವೆ ಪಕ್ಕದ ಉದ್ಯಾನವನದಲ್ಲಿ (ತಣ್ಣೀರು ಬಾವಿ ರಸ್ತೆ)ಇಂದು ಬೆಳಗ್ಗೆ ಜರುಗಿತು.
ದ.ಕ.ಜಿಲ್ಲಾಡಳಿತ, ನವಮಂಗಳೂರು ಬಂದರು ಮಂಡಳಿ, ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರದ ವತಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಅಪರ ಜಿಲ್ಲಾಧಿಕಾರಿ ವೈಶಾಲಿ, ದ.ಕ. ಜಿಪಂ ಸಿಇಒ ಡಾ.ಎಂ.ಆರ್.ರವಿ, ಮಂಗಳೂರು ಸಹಾಯಕ ಆಯುಕ್ತ ಮಹೇಶ್ ಕರ್ಜಗಿ, ದ.ಕ. ಜಿಲ್ಲಾ ಗೃಹರಕ್ಷಕ ದಳದ ಅಧೀಕ್ಷಕ ಮುರಳಿ ಮೋಹನ್ ಚೂಂತಾರ್, ಡಿಸಿಪಿ ಉಮಾ ಪ್ರಶಾಂತ್, ಮನಪಾ ಆಯುಕ್ತ ಮುಹಮ್ಮದ್ ನಝೀರ್, ಎನ್ಎಂಪಿಟಿ ಅಧ್ಯಕ್ಷ ಸುರೇಶ್ ಪಿ.ಶಿರ್ವಾಡ್ಕರ್, ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರದ ಪ್ರಭಾರ ನಿರ್ದೇಶಕ ಅಬ್ರಹಾಂ ಕೊಶಿ, ಮೀರಾ ಕುಸೂರ್, ಮಂಗಳೂರು ವಿಮಾನ ದುರಂತ ಸಂತ್ರಸ್ತ ಕುಟುಂಬಗಳ ಸಮಿತಿಯ ಅಧ್ಯಕ್ಷ ಮುಹಮ್ಮದ್ ಬ್ಯಾರಿ ಎಡಪದವು ಮತ್ತಿತರರು ಶ್ರದ್ಧಾಂಜಲಿ ಸಲ್ಲಿಸಿದರು.



