ಮಂಗಳೂರು: ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಟ್ರೋಲಿ ಬ್ಯಾಗ್ ತೆರೆದು ಬೆಲೆಬಾಳುವ ಚಿನ್ನಾಭರಣ ಕಳವುಗೈದಿರುವ ಆರೋಪದಲ್ಲಿ ನಾಲ್ಕು ಮಂದಿಯನ್ನು ಬಜ್ಪೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ವಶಕ್ಕೆ ಪಡೆದುಕೊಂಡವರೆಲ್ಲರೂ ವಿಮಾನ ನಿಲ್ದಾಣದಲ್ಲಿ ಲೆಗೇಜ್ ಲೋಡ್ – ಅನ್ ಲೋಡ್ ಮಾಡುತ್ತಿದ್ದವರು ಎಂದು ತಿಳಿದು ಬಂದಿದೆ.
ಸಿಆರ್‌ಪಿಎಫ್ ಜವಾನ ಹರಿಕೇಶ್ ಎಂಬವರ ಪತ್ನಿ ರಾಜೇಶ್ವರಿ ಪದ್ಮಶಾಲಿ ಅವರು ಸಂಬಂಧಿಕರ ಮದುವೆಗಾಗಿ ಶನಿವಾರ ಬೆಳಗ್ಗೆ 8:45ರ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಬೆಂಗಳೂರಿನಿಂದ ಹೊರಟು ಅದೇ ದಿನ ಬೆಳಗ್ಗೆ 9:30ಕ್ಕೆ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದರು.
ವಿಮಾನ ನಿಲ್ದಾಣದ ಹೊರಗೆ ಬಂದು ತನ್ನ ಲಾಗೇಜ್ ಟ್ರಾಲಿ ಬ್ಯಾಗ್ ನ ಲಾಕ್ ತೆರದಿತ್ತು. ತಕ್ಷಣ ಬ್ಯಾಗ್ ಪರಿಶೀಲಿಸಿದಾಗ 56 ಗ್ರಾಂ ತೂಕದ ಸುಮಾರು 4.5 ಲಕ್ಷ ರೂ. ಮೌಲ್ಯದ ಚಿನ್ನದ ನೆಕ್ಲೆಸ್ ಕಳವಾಗಿರುವುದು ಗೊತ್ತಾಗಿದೆ.
ಈ ಸಂಬಂಧ ಅವರು ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಮಂಗಳೂರು ವಿಮಾನ ನಿಲ್ದಾಣದಲ್ಲಿನ ಲೋಡ್ – ಅನ್ ಲೋಡ್ ಮಾಡುವ ಕೆಲಸ ಮಾಡುತ್ತಿದ್ದ ನಾಲ್ಕು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಈ ಪೈಕಿ ಇಬ್ಬರನ್ನು ಪೊಲೀಸರು ಬಂಧಿಸಿರುವ ಮಾಹಿತಿ ಲಭ್ಯವಾಗಿದೆ.
ವಿದೇಶಗಳಿಂದ ಬರುವ ಹಲವರ ಲಗೇಜ್ ಬ್ಯಾಗ್ ಗಳನ್ನು ಅಕ್ರಮವಾಗಿ ತೆರೆದು ಅದರಲ್ಲಿದ್ದ ಚಿನ್ನಾಭರಣ, ಮೊಬೈಲ್ ಫೋನ್ ಸೇರಿ ಬೆಲೆಬಾಳುವ ವಸ್ತುಗಳ ಕಳವು ನಡೆದಿತ್ತು. ಈ ಬಗ್ಗೆ ಪ್ರಯಾಣಿಕರು ವಿಮಾನ ನಿಲ್ದಾಣದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದರು. ಇನ್ನೂ ಕೆಲವರು ಪೊಲೀಸರಿಗೆ ದೂರು ನೀಡುತ್ತಿದ್ದರು.
ಸದ್ಯ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ಬ್ಯಾಗ್ ಗಳಿಂದ ಕಳವು ಮಾಡುವ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…