Featured

ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಚಿನ್ನಾಭರಣ ಕಳವು ಪ್ರಕರಣ: ನಾಲ್ಕು ಸಿಬ್ಬಂದಿ ವಶಕ್ಕೆ – vishwanews24

ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಚಿನ್ನಾಭರಣ ಕಳವು ಪ್ರಕರಣ: ನಾಲ್ಕು ಸಿಬ್ಬಂದಿ ವಶಕ್ಕೆ

ಮಂಗಳೂರು: ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಟ್ರೋಲಿ ಬ್ಯಾಗ್ ತೆರೆದು ಬೆಲೆಬಾಳುವ ಚಿನ್ನಾಭರಣ ಕಳವುಗೈದಿರುವ ಆರೋಪದಲ್ಲಿ ನಾಲ್ಕು ಮಂದಿಯನ್ನು ಬಜ್ಪೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ‌.

ವಶಕ್ಕೆ ಪಡೆದುಕೊಂಡವರೆಲ್ಲರೂ ವಿಮಾನ‌ ನಿಲ್ದಾಣದಲ್ಲಿ ಲೆಗೇಜ್ ಲೋಡ್ – ಅನ್ ಲೋಡ್ ಮಾಡುತ್ತಿದ್ದವರು ಎಂದು ತಿಳಿದು ಬಂದಿದೆ.

ಸಿಆರ್‌ಪಿಎಫ್ ಜವಾನ ಹರಿಕೇಶ್ ಎಂಬವರ ಪತ್ನಿ ರಾಜೇಶ್ವರಿ ಪದ್ಮಶಾಲಿ ಅವರು ಸಂಬಂಧಿಕರ ಮದುವೆಗಾಗಿ ಶನಿವಾರ ಬೆಳಗ್ಗೆ 8:45ರ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಬೆಂಗಳೂರಿನಿಂದ ಹೊರಟು ಅದೇ ದಿನ ಬೆಳಗ್ಗೆ 9:30ಕ್ಕೆ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದರು.

ವಿಮಾನ ನಿಲ್ದಾಣದ ಹೊರಗೆ ಬಂದು ತನ್ನ ಲಾಗೇಜ್ ಟ್ರಾಲಿ ಬ್ಯಾಗ್ ನ ಲಾಕ್ ತೆರದಿತ್ತು. ತಕ್ಷಣ ಬ್ಯಾಗ್ ಪರಿಶೀಲಿಸಿದಾಗ 56 ಗ್ರಾಂ ತೂಕದ ಸುಮಾರು 4.5 ಲಕ್ಷ ರೂ. ಮೌಲ್ಯದ ಚಿನ್ನದ ನೆಕ್ಲೆಸ್ ಕಳವಾಗಿರುವುದು ಗೊತ್ತಾಗಿದೆ.

ಈ ಸಂಬಂಧ ಅವರು ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಮಂಗಳೂರು ವಿಮಾನ ನಿಲ್ದಾಣದಲ್ಲಿನ ಲೋಡ್ – ಅನ್ ಲೋಡ್ ಮಾಡುವ ಕೆಲಸ ಮಾಡುತ್ತಿದ್ದ ನಾಲ್ಕು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ‌ ಎನ್ನಲಾಗಿದೆ. ಈ ಪೈಕಿ ಇಬ್ಬರನ್ನು ಪೊಲೀಸರು ಬಂಧಿಸಿರುವ ಮಾಹಿತಿ ಲಭ್ಯವಾಗಿದೆ.

ವಿದೇಶಗಳಿಂದ ಬರುವ ಹಲವರ ಲಗೇಜ್ ಬ್ಯಾಗ್ ಗಳನ್ನು ಅಕ್ರಮವಾಗಿ ತೆರೆದು ಅದರಲ್ಲಿದ್ದ ಚಿನ್ನಾಭರಣ, ಮೊಬೈಲ್ ಫೋನ್ ಸೇರಿ ಬೆಲೆಬಾಳುವ ವಸ್ತುಗಳ ಕಳವು ನಡೆದಿತ್ತು‌. ಈ ಬಗ್ಗೆ ಪ್ರಯಾಣಿಕರು ವಿಮಾನ ನಿಲ್ದಾಣದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದರು. ಇನ್ನೂ ಕೆಲವರು ಪೊಲೀಸರಿಗೆ ದೂರು ನೀಡುತ್ತಿದ್ದರು.

ಸದ್ಯ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ಬ್ಯಾಗ್ ಗಳಿಂದ ಕಳವು ಮಾಡುವ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

2 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

2 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

3 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

3 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

3 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

3 hours ago