ಮುಂಬೈ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಇದ್ದ ವಿಮಾನ ಪತನವಾಗಿದೆ. ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ದುರಂತ ಸಂಭವಿಸಿದೆ.
ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬಳಸುತ್ತಿದ್ದ ವಿಮಾನವು ಬಾರಾಮತಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಪ್ರಯತ್ನದ ಸಂದರ್ಭದಲ್ಲಿ ಪತನಗೊಂಡು ಹಲವಾರು ಜನರು ಗಾಯಗೊಂಡಿದ್ದಾರೆ. ಅವರು ಇಂದು ನಾಲ್ಕು ಪ್ರಮುಖ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲು ಬಾರಾಮತಿಗೆ ಹೊರಟಿದ್ದರು.
ವಿಮಾನವು ಧಗಧಗನೆ ಹೊತ್ತಿ ಉರಿದಿದ್ದು, ಸುಟ್ಟು ಕರಕಲಾಗಿದೆ. ವಿಮಾನದಲ್ಲಿದ್ದ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ತುರ್ತು ಲ್ಯಾಂಡಿಂಗ್ ಪ್ರಯತ್ನಕ್ಕೆ ಕಾರಣವೇನು ಎಂಬುದರ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ಬಾರಮತಿಗೆ ಅಜಿತ್ ಪವಾರ್ ತೆರಳುತ್ತಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. 3-4 ಮಂದಿ ವಿಮಾನದಲ್ಲಿ ಇದ್ದರು ಎನ್ನಲಾಗಿದೆ. ಅಜಿತ್ ಪವಾರ್, ಇಬ್ಬರು ಬಾಡಿಗಾರ್ಡ್ ಕೂಡಾ ಗಂಭೀರವಾಗಿ ಗಾಯಗೊಂಡಿದ್ದಾರೆ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…