Featured

ವಿಮೆ ಹಣಕ್ಕಾಗಿ ತಂದೆಯನ್ನೇ ಕೊಂದ ಮಗ : ನಾಲ್ವರ ಬಂಧನ – vishwanews24

ವಿಮೆ ಹಣಕ್ಕಾಗಿ ತಂದೆಯನ್ನೇ ಕೊಂದ ಮಗ : ನಾಲ್ವರ ಬಂಧನ

ಕಲಬುರಗಿ: ವಿಮೆ ಹಣಕ್ಕಾಗಿ ಸ್ವಂತ ತಂದೆಯನ್ನು ಕೊಂದು ಅಪಘಾತದ ಕಥೆ ಹೆಣೆದು ಓಡಾಡಿಕೊಂಡಿದ್ದ ಮಗನನ್ನು ಮಾಡಬೂಳ  ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸತೀಶ್ ಬಂಧಿತ ಆರೋಪಿಯಾಗಿದ್ದು, ಈತನೊಟ್ಟಿಗೆ ಸೇರಿ ಕೊಲೆಗೆ ಮಾಸ್ಟರ್ ಪ್ಲಾನ್ ರೂಪಿಸಿದ ಸತೀಶ್ ಗೆಳೆಯರಾದ ಅರುಣ್, ಯುವರಾಜ್ ಹಾಗೂ ರಾಕೇಶ್ ಎಂಬುವವರನ್ನು ಸಹ ಬಂಧಿಸಲಾಗಿದೆ.

ಜು.8ರಂದು ಸತೀಶ್ ತನ್ನ ತಂದೆ ಕಾಳಿಂಗರಾವ್ ಜೊತೆ ಬೈಕ್ ಮೇಲೆ ಬರುತ್ತಿದ್ದ ವೇಳೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಬೆಣ್ಣೂರ್ (ಬಿ) ಕ್ರಾಸ್ ಬಳಿ ಅಪಘಾತ ಸಂಭವಿಸಿತ್ತು. ಈ ವೇಳೆ ಕಾಳಿಂಗರಾವ್ ಸಾವನ್ನಪ್ಪಿದ್ದರು. ಸಣ್ಣ ಪುಟ್ಟ ಗಾಯಗಳೊಂದಿಗೆ ಸತೀಶ್ ಪ್ರಾಣಾಪಾಯದಿಂದ ಪಾರಾಗಿದ್ದ. ಈ ಘಟನೆ ಕುರಿತು ಮಾಡಬೂಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಆರಂಭಿಸಿದ ಬಳಿಕ ಬೆಚ್ಚಿ ಬೀಳಿಸುವ ಅಂಶ ಬಯಲಿಗೆ ಬಂದಿದೆ. ಸತೀಶ್ ಹೋಟೆಲ್ ಉದ್ಯಮಕ್ಕೆ ಕೈ ಹಾಕಿ ವಿಪರೀತ ಸಾಲ ಮಾಡಿಕೊಂಡಿದ್ದ. ಸಾಲ ತೀರಿಸುವ ಸಲುವಾಗಿ ತನ್ನ ತಂದೆಯನ್ನು ಅಪಘಾತದ ನೆಪದಲ್ಲಿ ಕೊಂದಿದ್ದು, ಅವರ ಹೆಸರಿನಲ್ಲಿರುವ ವಿಮೆ ಹಣ ಬಳಸಿಕೊಂಡು ತನ್ನ ಸಾಲ ತೀರಿಸಲು ತಂತ್ರ ರೂಪಿಸಿದ್ದ ಎಂಬುದು ತನಿಖೆಯಿಂದ ಬಯಲಾಗಿದೆ.

ತನ್ನ ತಂದೆಯನ್ನು ಕೊಲ್ಲುವ ದುರುದ್ದೇಶದಿಂದಲೇ ಅವರ ಹೆಸರಿನಲ್ಲಿ ಸತೀಶ್ ಎರಡು ವಿಮೆ ಮಾಡಿಸಿದ್ದ. ಅಪಘಾತದ ಬಳಿಕ ಒಂದು ವಿಮೆ ಕಂಪನಿಯಿಂದ 5 ಲಕ್ಷ ರೂ. ವಿಮೆ ಪಡೆದಿದ್ದ. ಮತ್ತೊಂದು ವಿಮೆ ಕಂಪನಿಯಿಂದ 22 ಲಕ್ಷ ರೂ. ವಿಮೆ ಹಣ ಪಡೆಯಲು ಪ್ರಯತ್ನ ನಡೆಸಿದ್ದ. ಆದರೆ ತನಿಖೆ ವೇಳೆ ಸತೀಶ್ ವರ್ತನೆಯ ಕುರಿತು ಪೊಲೀಸರಿಗೆ ಸಂಶಯ ವ್ಯಕ್ತವಾಗಿತ್ತು. ಇದರಿಂದ ತನಿಖೆಯ ಆಳ ಮತ್ತು ಅಗಲ ವಿಸ್ತರಿಸಿದ ಪೊಲೀಸರು, ಸತೀಶ್ ಆತನ ಗೆಳೆಯ ಅರುಣ ನೀಡಿದ ಮಾಸ್ಟರ್ ಪ್ಲಾನ್ ಪ್ರಕಾರ ತಂದೆಯ ಕೊಲೆಗೆ ವ್ಯವಸ್ಥಿತ ಸಂಚು ರೂಪಿಸಿರುವುದನ್ನು ಪತ್ತೆ ಹಚ್ಚಿದ್ದಾರೆ.

ಅನುಮಾನದ ಬೆನ್ನು ಹತ್ತಿದ ಪೊಲೀಸರು ಸತೀಶನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಹೋಟೆಲ್ ದಂಧೆ ಕೈಕೊಟ್ಟ ಕಾರಣಕ್ಕಾಗಿ ವಿಪರೀತ ಸಾಲವಾಗಿತ್ತು. ಇದರ ಪರಿಣಾಮವಾಗಿ ಸಾಲಗಾರರ ಕಾಟ ಹೆಚ್ಚಾಗಿತ್ತು. ಹಾಗಾಗಿ ತನ್ನ ತಂದೆಯನ್ನು ಕೊಂದರೆ ಅವರ ಹೆಸರಿನಲ್ಲಿರುವ ವಿಮೆ ಹಣ ಪಡೆದು ಸಾಲ ತೀರಿಸಬಹುದು ಎಂಬ ಲೆಕ್ಕಾಚಾರದೊಂದಿಗೆ ಈ ಕೃತ್ಯ ಎಸಗಿದ್ದಾಗಿ ಆತ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

14 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

15 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

15 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

18 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

18 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

18 hours ago