Featured

ವಿರಾಟ್‌ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ 2019ರ ವಿಶ್ವಕಪ್‌ ಗೆಲ್ಲಲಿದೆ : ಖ್ಯಾತ ಜ್ಯೋತಿಷಿ ನರೇಂದ್ರ ಬುಂಡೆ ಭವಿಷ್ಯ -Vishwanews24

ನಾಗ್ಪುರ: 2019 ರ ಐಸಿಸಿ ವಿಶ್ವಕಪ್ ಅನ್ನು ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಗೆಲ್ಲಲಿದೆ ಎಂದು ಮಹಾರಾಷ್ಟ್ರದ ಖ್ಯಾತ ಜ್ಯೋತಿಷಿ ನರೇಂದ್ರ ಬುಂಡೆ ಭವಿಷ್ಯ ನುಡಿದಿದ್ದಾರೆ.

ವಿರಾಟ್‌ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ 2019ರ ವಿಶ್ವಕಪ್‌ ಅನ್ನು ಗೆಲ್ಲಲಿದೆ ಎಂದು ಮಹಾರಾಷ್ಟ್ರದ ನಾಗ್ಪುರದ ಖ್ಯಾತ ಜ್ಯೋತಿಷಿ ನರೇಂದ್ರ ಬುಂಡೆ ಭವಿಷ್ಯ ನುಡಿದಿದ್ದಾರೆ. ಕೊಹ್ಲಿಯ ಜಾತಕದ ಪ್ರಕಾರ ಸಂಖ್ಯಾಶಾಸ್ತ್ರ, ನಕ್ಷತ್ರ ಮತ್ತು ಗ್ರಹಗಳ ಸ್ಥಾನಗಳನ್ನು ಆಧರಿಸಿ ಜುಲೈ 14ರಂದು ಟೀಂ ಇಂಡಿಯಾ ಗೆಲ್ಲಲಿದೆ ಎಂದು ಬುಂಡೆ ತಿಳಿಸಿದ್ದಾರೆ. ಇಂಗ್ಲೆಂಡ್‌ನ ಲಾರ್ಡ್ಸ್‌ ಮೈದಾನದಲ್ಲಿ ನಡೆಯುವ ವಿಶ್ವಕಪ್‌ ಫೈನಲ್‌ ಪಂದ್ಯವನ್ನು ವಿರಾಟ್‌ ಕೊಹ್ಲಿ ನೇತೃತ್ವದ ಭಾರತ ತಂಡ ಗೆಲ್ಲುವ ಪ್ರಬಲ ಅವಕಾಶಗಳು ಇವೆ ಎಂದು ತಿಳಿಸಿದ್ದಾರೆ.

ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್‌ ವಿರುದ್ಧ ಭಾರತ ಪರದಾಡಬಹುದು. ಕೊಹ್ಲಿ ಹೆಚ್ಚು ರನ್‌ಗಳನ್ನು ಗಳಿಸುವುದರೊಂದಿಗೆ ತಂಡವನ್ನು ಮುನ್ನಡೆಸಲಿದ್ದಾರೆ. ಅಲ್ಲದೆ, ಶಿಖರ್ ಧವನ್, ರೋಹಿತ್ ಶರ್ಮಾ, ಕೆ.ಎಲ್‌.ರಾಹುಲ್‌ ಹಾಗೂ ಹಾರ್ದಿಕ್‌ ಪಾಂಡ್ಯ ವಿಶ್ವಕಪ್‌ ಪಂದ್ಯಗಳಲ್ಲಿ ಬ್ಯಾಟಿಂಗ್‌ನಲ್ಲಿ ಮಿಂಚಲಿದ್ದಾರೆ. ಬೌಲರ್‌ಗಳ ಪೈಕಿ ಜಸ್ಪ್ರೀತ್‌ ಬುಮ್ರಾ, ಮೊಹಮ್ಮದ್‌ ಶಮಿ ಹಾಗೂ ಯಜುವೇಂದ್ರ ಚಾಹಲ್ ಹೆಚ್ಚು ವಿಕೆಟ್‌ಗಳನ್ನು ಪಡೆಯಲಿದ್ದಾರೆ ಎಂದೂ ಬುಂಡೆ ವಿಶ್ವಕಪ್‌ ಆರಂಭಕ್ಕೂ ಮುನ್ನ ಭವಿಷ್ಯ ನುಡಿದಿದ್ದರು.

ವಿಶ್ವಕಪ್ ಕುರಿತು ಭವಿಷ್ಯ ನುಡಿದಿರುವ ನರೇಂದ್ರ ಬುಂಡೆ, 1983 ರಲ್ಲಿ ಕಪಿಲ್ ದೇವ್ ನೇತೃತ್ವದಲ್ಲಿ ಭಾರತ ತಂಡ ವಿಶ್ವಕಪ್ ಗೆಲ್ಲುವಾಗ ಇದ್ದ ಗ್ರಹಗಳ ಸ್ಥಾನಗಳು ಈ ಬಾರಿಯೂ ಬಹುತೇಕ ಹೋಲುತ್ತವೆ. ಭಾರತಕ್ಕೆ ನಂಬರ್ 3 ಲಕ್ಕಿಯಾಗಿದೆ. ಕೊಹ್ಲಿ ಜಾತಕದ ಪ್ರಕಾರ ಸಂಖ್ಯಾಶಾಸ್ತ್ರ, ನಕ್ಷತ್ರ ಮತ್ತು ಗ್ರಹಗಳ ಸ್ಥಾನಗಳನ್ನು ಆಧರಿಸಿ ಜುಲೈ 14 ರಂದು ಟೀಂ ಇಂಡಿಯಾ ವಿಶ್ವಕಪ್ ಗೆಲ್ಲಲಿದೆ ಎಂದು ಹೇಳಿದ್ದಾರೆ.

Vishwa News 24

Recent Posts

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

27 minutes ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

10 hours ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

11 hours ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

11 hours ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

11 hours ago

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ – vishwanews24

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…

11 hours ago