ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ ದಂಪತಿಗೆ ಹೆಣ್ಣುಮಗು ಜನನ -Vishwanews24
ಹೆಣ್ಣು ಮಗುವಿಗೆ ಜನ್ಮ ನೀಡಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ -Vishwanews24
ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಕಳೆದ ವರ್ಷ ಆಗಸ್ಟ್ ನಲ್ಲಿ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಈ ಜೋಡಿ ಸಾಮಾಜಿಕ ಜಾಲತಾಣಕ್ಕೆ ಹೇಳಿಕೊಂಡಿತ್ತು. ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಬಳಿಕ ತವರಿಗೆ ಮರಳಿದ ಕೊಹ್ಲಿ, ಭಾರತಕ್ಕೆ ವಾಪಸಾಗಿದ್ದರು.
2017ರ ಡಿಸೆಂಬರ್‌ನಂದು ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಇಟಲಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಮೊದಲ ಮಗುವಿಗೆ ಅಪ್ಪನಾದ ಖುಷಿಯಲ್ಲಿ ವಿರಾಟ್ ಕೊಹ್ಲಿ ಇದ್ದಾರೆ.
— Virat Kohli (@imVkohli) January 11, 2021
