ಇಟಾರ್ಸಿ, : ವಿರೋಧ ಪಕ್ಷಗಳು ನನ್ನ ಹತ್ಯೆಯ ಕನಸು ಕಾಣುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಗಂಭೀರ ಆರೋಪ ಮಾಡಿದ್ದಾರೆ. ಲೋಕಸಭಾ ಚುನಾವಣೆ ವಿಶೇಷ ಪುಟ ಮಧ್ಯಪ್ರದೇಶದ ಇಟಾರ್ಸಿಯಲ್ಲಿ ಚುನಾವಣಾ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ವಿರೋಧ ಪಕ್ಷಗಳ ಹರಿಹಾಯ್ದರು.
ಮೋದಿ ವಿರುದ್ಧ ಸ್ಪರ್ಧಿಸಿದ್ದ ಮಾಜಿ ಸೈನಿಕನ ನಾಮಪತ್ರ ತಿರಸ್ಕೃತ ಇತ್ತೀಚೆಗೆ ಕಾಂಗ್ರೆಸ್‌ನ ಒಬ್ಬರು, ಮೋದಿ ಪಾಕಿಸ್ತಾನಕ್ಕೆ ಹೋಗಿ ಬೀಳುವಂತೆ ಒದೆಯಬೇಕು ಎಂದು ಹೇಳಿದ್ದರು. ಆ ಪಕ್ಷ ನನ್ನ ವಿರುದ್ಧ ಎಷ್ಟು ದ್ವೇಷ ಕಾರುತ್ತಿದೆ ಎಂದರೆ ಅವರು ನನ್ನನ್ನು ಸಾಯಿಸುವ ಕನಸು ಕಾಣುತ್ತಿದ್ದಾರೆ. ಈಗ ಕಾಂಗ್ರೆಸ್ ತಾವು ಯಾರ ಕಡೆ ಇದ್ದೇವೆ ಎಂಬುದನ್ನು ತಿಳಿಸಲಿ.. ಭಾರತ ಅಥವಾ ಪಾಕಿಸ್ತಾನ? ಎಂದು ಮೋದಿ ಹೇಳಿದರು.
ಬಾಂಬ್ ಸ್ಫೋಟ ಸಂಭವಿಸಿದ ಬಳಿಕ ಶ್ರೀಲಂಕಾ ಸರ್ಕಾರ ತೆಗೆದುಕೊಂಡ ತೀರ್ಮಾನಗಳಲ್ಲಿ ಒಂದು ವಿವಾದಿತ ಧರ್ಮ ಪ್ರಚಾರಕ ಝಾಕೀರ್ ನಾಯ್ಕ್‌ನ ಟಿವಿ ಚಾನೆಲ್‌ಅನ್ನು ನಿಷೇಧಿಸಿದ್ದು. ಇದೇ ಝಾಕೀರ್ ನಾಯ್ಕ್‌ನನ್ನು ಕಾಂಗ್ರೆಸ್ ಓಲೈಸುತ್ತಿದೆ ಎಂದು ಮೋದಿ ಆರೋಪಿಸಿದರು.
ಪ್ರಿಯಾಂಕಾ ಎದುರೇ ಮೋದಿ ವಿರುದ್ಧ ಅಸಭ್ಯ ಪದ ಬಳಸಿದ ಮಕ್ಕಳು ಎಲ್ಲ ಮಟ್ಟಗಳಲ್ಲಿಯೂ ಕಾಂಗ್ರೆಸ್ ಅಪ್ರಮಾಣಿಕತೆ ತೋರಿಸುತ್ತಿದೆ. ಆದರೆ, ಅದರ ನಾಯಕರು ಪ್ರಾಮಾಣಿಕವಾಗಿ ವಂಶಪಾರಂಪರ್ಯ ಆಡಳಿತವನ್ನು ಹಾಗೂ ಭ್ರಷ್ಟಾಚಾರವನ್ನು ಪಾಲಿಸುತ್ತಿದೆ ಎಂದು ಮೋದಿ ಆರೋಪಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…