ತಮಿಳುನಾಡು: ತಮಿಳುನಾಡಿನ ಕೊಯಮತ್ತೂರಿನಲ್ಲಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ವಿಳಾಸ ಕೇಳುವ ನೆಪದಲ್ಲಿ ಮೇಕೆ ಮೇಯಿಸುತ್ತಿದ್ದ ವೃದ್ಧೆಯ ಚಿನ್ನದ ಸರ ಕಳ್ಳತನ ಮಾಡಿದ್ದು, ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಪ್ರಶಾಂತ್(20) ಮತ್ತು ತೇಜಸ್ವಿನಿ(20) ಎಂದು ಗುರುತಿಸಲಾಗಿದೆ.
ಹೊಲದಲ್ಲಿ ವೃದ್ಧೆಯೊಬ್ಬರು ಮೇಕೆಗಳನ್ನು ಮೇಯಿಸುತ್ತಿದ್ದು, ಆಗ ಓರ್ವ ಯುವತಿ ಮತ್ತು ಯುವಕ ಸ್ಕೂಟರ್‌ನಲ್ಲಿ ಅಲ್ಲಿಗೆ ಬಂದು ವಿಳಾಸ ಕೇಳುವ ನೆಪದಲ್ಲಿ ಈಕೆಯನ್ನು ಮಾತನಾಡಿಸಿದ್ದಾರೆ. ಯುವತಿ ಸ್ಕೂಟರ್ ನಡೆಸುತ್ತಿದ್ದರೆ, ಹಿಂಬದಿ ಕುಳಿತಿದ್ದ ಯುವಕ ಏಕಾಏಕಿ ಕಾಳಿಯಮ್ಮಳ್ ಬಳಿ ಇದ್ದ 5.5 ಪವನ್ ಚಿನ್ನದ ಸರ ಕಸಿದು ಪರಾರಿಯಾಗಿದ್ದಾರೆ.
ಇನ್ನು ಈ ಬಗ್ಗೆ ದಾಖಲಾದ ದೂರಿನನ್ವಯ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಅಲ್ಲಿದ್ದ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿದ್ದು, ಸಿಸಿಟಿವಿಯಲ್ಲಿ ಸ್ಕೂಟರ್‌ನ ನಂಬರ್ ದಾಖಲಾಗಿತ್ತು. ಬಳಿಕ ಪೊಲೀಸರು ಪ್ರಶಾಂತ್ ಹಾಗೂ ತೇಜಸ್ವಿನಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಇಬ್ಬರೂ ತಪ್ಪೊಪ್ಪಿಕೊಂಡಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…