ನವದೆಹಲಿ: ಪ್ರವಾದಿ ಮಹಮ್ಮದ್‌ರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡೀ ದೇಶದ ಜನರ ಕ್ಷಮೆಯಾಚಿಸಿ ಎಂದು ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರಿಗೆ ಸುಪ್ರೀಂಕೋರ್ಟ್ ಸೂಚಿಸಿದೆ.
ವಿವಾದಾತ್ಮಹ ಹೇಳಿಕೆ ನೀಡಿ ದೇಶದಲ್ಲಿ ಹಲವಾರು ಹಿಂಸಾಚಾರಕ್ಕೆ ಕಾರಣವಾದ ನೂಪುರ್ ಶರ್ಮಾ ಅವರನ್ನು ಸುಪ್ರೀಂಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದು, ಉದಯಪುರದಲ್ಲಿ ನಡೆದ ಘಟನೆಗೆ ನೀವೇ ಕಾರಣ. ವಿವಾದಾತ್ಮಕ ಹೇಳಿಕೆ ಕುರಿತು ಇಡೀ ದೇಶದ ಜನರ ಕ್ಷಮೆ ಯಾಚಿಸಿ ಎಂದು ಸೂಚನೆ ನೀಡಿದೆ.
ವಿವಾದಾತ್ಮಕ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ನೂಪುರ್ ಶರ್ಮಾ ವಿರುದ್ದ ದೆಹಲಿ, ಕೋಲ್ಕತ್ತಾ, ಬಿಹಾರ, ಪುಣೆ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಹೀಗಾಗಿ ತಮ್ಮ ವಿರುದ್ದ ವಿವಿಧ ರಾಜ್ಯಗಳಲ್ಲಿ ದಾಖಲಾಗಿರುವ ಎಲ್ಲಾ ದೂರುಗಳನ್ನು ದೆಹಲಿಗೆ ವರ್ಗಾಯಿಸಬೇಕೆಂದು ಕೋರಿ ನೂಪುರ್ ಶರ್ಮಾ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಕೊಲೆ ಬೆದರಿಕೆ ಇರುವ ಹಿನ್ನೆಲೆಯಲ್ಲಿ ವಿಚಾರಣೆಗೆ ಬೇರೆ ಬೇರೆ ರಾಜ್ಯಗಳಿಗೆ ತೆರಳುವುದರಿಂದ ಜೀವಕ್ಕೆ ಅಪಾಯವಿದೆ. ಹೀಗಾಗಿ ದೆಹಲಿಗೆ ಎಲ್ಲಾ ಪ್ರಕರಣಗಳನ್ನು ವರ್ಗಾವಣೆ ಮಾಡಬೇಕು ಎಂಬುದಾಗಿ ಕೋರಿದ್ದಾರೆ ಎನ್ನಲಾಗಿದೆ.
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…
ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…
ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…