ಬೆಂಗಳೂರು: ಯಕ್ಷಗಾನ ಕಲಾವಿದರಿಗೆ ಅವಮಾನ ಮಾಡಿಲ್ಲ, ಮಾಡುವ ಉದ್ದೇಶ ಕೂಡ ನನ್ನದಾಗಿರಲಿಲ್ಲ, ನನ್ನ ಹೇಳಿಕೆ ಬೇಸರವಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ವಿಷಾದ ವ್ಯಕ್ತಪಡಿಸಿದ್ದಾರೆ.
ತಮ್ಮ ಹೇಳಿಕೆ ಮಾಧ್ಯಮಗಳಲ್ಲಿ ಪ್ರಸಾರವಾಗಿ ವಿವಾದವಾದ ಬೆನ್ನಲ್ಲೇ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಸ್ಪಷ್ಟನೆ ನೀಡಿದ್ದಾರೆ.
ಯಕ್ಷಗಾನ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿ ಅನೇಕರ ಆಕ್ರೋಶಕ್ಕೆ ಗುರಿಯಾಗಿತ್ತು. ಪುರುಷೋತ್ತಮ ಬಿಳಿ ಮಲೆಯವರು ಬುಧವಾರ(ನ19) ಮಾಧ್ಯಮಗಳ ಎದುರು ಕ್ಷಮೆ ಯಾಚನೆ ಮಾಡಿದ್ದಾರೆ. ನನ್ನ ಹೇಳಿಕೆಯಿಂದ ಕಲಾವಿದರಿಗೆ ನೋವಾದಲ್ಲಿ ಕ್ಷಮೆ ಯಾಚನೆ ಮಾಡುತ್ತೇನೆ ಎಂದಿದ್ದಾರೆ.
“ಎಲ್ಲರೂ ಅಲ್ಲ ಕೆಲವು ಕಲಾವಿದರು ಸಲಿಂಗಿಗಳು ಹೌದು. ಆ ಅನಿವಾರ್ಯತೆ ಸೃಷ್ಟಿಯಾಗುತ್ತಿತ್ತು.ಹಿಂದೆ ನವೆಂಬರ್ ನಲ್ಲಿ ಆರಂಭವಾದ ತಿರುಗಾಟ ಮೇ ಕೊನೆಯಲ್ಲಿ ಮುಕ್ತಾಯವಾಗುತ್ತಿತ್ತು. ಕಲಾವಿದರಿಗೆ ಮನೆಯ ಸಂಪರ್ಕ ಕಷ್ಟವಾಗುತ್ತಿತ್ತು. ಯಕ್ಷಗಾನ ಕಲೆ ಈಗ ಹಿಂದಿನಂತಿಲ್ಲ, ಕಲಾವಿದರಿಗೆ ಅನೇಕ ಸೌಲಭ್ಯಗಳಿವೆ. ಅನೇಕರು ಮಧ್ಯ ರಾತ್ರಿ ಪ್ರದರ್ಶನ ಮುಗಿಸಿ ಕಾರುಗಳಲ್ಲಿ ಮನೆಗೆ ತಲುಪುತ್ತಾರೆ. ಹಿಂದೆ ಆ ಸೌಕರ್ಯಗಳಿರಲಿಲ್ಲ. ಕಲಾವಿದರ ಕಷ್ಟಗಳ ಕುರಿತು ನಾನು ಮಾತನಾಡಿದ್ದೆ.ಯಕ್ಷಗಾನ ಕಲಾವಿದರಿಗೆ ನನ್ನ ಹೇಳಿಕೆ ನೋವು ತಂದುಕೊಟ್ಟಿದ್ದರೆ ಕ್ಷಮೆ ಯಾಚಿಸುತ್ತೇನೆ” ಎಂದಿದ್ದಾರೆ.
ಮೈಸೂರು ವಿವಿ ಮಾನಸಗಂಗೋತ್ರಿ ಪ್ರಸಾರಾಂಗದಲ್ಲಿ ಮಂಗಳವಾರ ನಡೆದ ಧರೆಗೆ ದೊಡ್ಡವರ ಕಾವ್ಯದ ಏಳು ಪಠ್ಯಗಳು ಹಾಗೂ ನಾವು ಕೂಗುವ ಕೂಗು ಕೃತಿಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಬಿಳಿಮಲೆ “ಬಹುಪಾಲು ಮಂದಿ ಯಕ್ಷಗಾನ ಕಲಾವಿದರು ಸಲಿಂಗಿಗಳಾಗಿದ್ದು ಸ್ತ್ರೀ ಪಾತ್ರಧಾರಿಗಳ ಮೇಲೆ ಇತರರಿಗೆ ಮೋಹವಿರುತ್ತಿತ್ತು.ಯಕ್ಷಗಾನ ಕಲಾವಿದರು ಮೇಳಕ್ಕೆಂದು ಲಾರಿ ಏರಿ ಹೊರಟರೆ ಆರೇಳು ತಿಂಗಳು ತಿರುಗಾಟದಲ್ಲೇ ಇದ್ದುದರಿಂದ, ಅವರಲ್ಲಿನ ಕಾಮ ಭಾವನೆ ಸಲಿಂಗಕ್ಕೆ ದೂಡುತ್ತಿತ್ತು. ಅಲ್ಲಿ ಅಂತಹ ಅನಿವಾರ್ಯತೆಯೂ ಇರುತ್ತಿತ್ತು ಎಂದಿದ್ದರು.
“ಸತ್ಯವನ್ನು ಹೇಳಲು ಹಿಂಜರಿಯಬಾರದು. ಸಾಮಾನ್ಯವಾಗಿ ಕಲಾವಿದರಿಗೆ ಯಾರು ಹೆಣ್ಣು ಕೊಡುವುದಿಲ್ಲ. ಕಲಾವಿದರು ಮೇಳಕ್ಕೆಂದು ಹೋದರೆ ವಾಪಸ್ ಬರುವುದು ಆರೇಳು ತಿಂಗಳು. ಮನೆಯವರನ್ನು ಬಿಟ್ಟು ಇರಬೇಕಿತ್ತು. ಈ ಕಲಾವಿದರ ಪೈಕಿ ಸ್ತ್ರೀ ವೇಷಧಾರಿಗಳ ಮೇಲೆ ಪ್ರೀತಿ, ಮೋಹ ಏರ್ಪಡುತ್ತಿತ್ತು. ಒಂದು ವೇಳೆ ಸ್ತ್ರೀ ವೇಷದ ಕಲಾವಿದ ಸಲಿಂಗಕಾಮ ನಿರಾಕರಿಸಿದ್ದರೆ, ಭಾಗವತರು ಮರು ದಿವಸ ಅವರಿಗೆ ಪದ್ಯವನ್ನೇ ಕೊಡುತ್ತಿರಲಿಲ್ಲ. ರಂಗಭೂಮಿಯ ಮೇಲೆ ಅವನ ವಿರುದ್ಧ ಸೇಡು ತೀರಿಸಿಕೊಳ್ಳಲಾಗುತ್ತಿತ್ತು. ಮೇಳದಲ್ಲಿ ಅವಕಾಶ ಇಲ್ಲದೆ ಹೋದರೆ ಬದುಕೇ ಇಲ್ಲವೆಂಬ ಒತ್ತಡದಲ್ಲಿ ಕಲಾವಿದರು ಇರುತ್ತಿದ್ದರು” ಎಂದು ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…