Featured

ವಿವಾದಿತ ವ್ಯಕ್ತಿ ಸಾವರ್ಕರ್ ರಥಯಾತ್ರೆ ಬದಲಿಗೆ ರಾಯಣ್ಣ ಕಿತ್ತೂರು ಚೆನ್ನಮ್ಮ ರಥಯಾತ್ರೆ ಮಾಡಲಿ : ಎಂ.ಬಿ. ಪಾಟೀಲ

ವಿವಾದಿತ ವ್ಯಕ್ತಿ ಸಾವರ್ಕರ್ ರಥಯಾತ್ರೆ ಬದಲಿಗೆ ರಾಯಣ್ಣ ಕಿತ್ತೂರು ಚೆನ್ನಮ್ಮ ರಥಯಾತ್ರೆ ಮಾಡಲಿ : ಎಂ.ಬಿ. ಪಾಟೀಲ

ವಿಜಯಪುರ: ವಿವಾದಿತ ವ್ಯಕ್ತಿ ಸಾವರ್ಕರ್ ರಥಯಾತ್ರೆ ಬದಲಿಗೆ ನಮ್ಮ ನಾಡಿನ ಸ್ವಾತಂತ್ರ್ಯ ಹೋರಾಟಗಾರರಾದ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ, ಕಿತ್ತೂರು ರಾಣಿ ಚೆನ್ನಮ್ಮ, ಸುರಪುರದ ನಾಯಕರು, ಹಲಗಲಿ ಬೇಡರ ಫೋಟೊದೊಂದಿಗೆ ರಥಯಾತ್ರೆ ಮಾಡಲಿ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ ಅವರು ಬಿಜೆಪಿಗೆ ಸಲಹೆ ನೀಡಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಐದು ಬಾರಿ ಬ್ರಿಟಿಷ್ ರಿಗೆ ತಪ್ಪೊಪ್ಪಿಗೆ ಪತ್ರ ಬರೆದ ವಿವಾದಿತ ವ್ಯಕ್ತಿ ಸಾವರ್ಕರ್ ರಥಯಾತ್ರೆ ಮಾಡುವುದಕ್ಕಿಂತ ನಮ್ಮ ನಾಡಿನ ವಿವಾದ ರಹಿತ, ಬ್ರಿಟಿಷ್ ರ ಕ್ಷಮಾಪಣೆ ಯಾಚಿಸದ ಸ್ವಾತಂತ್ರ್ಯ ಹೋರಾಟಗಾರರ ಕುರಿತು ರಥಯಾತ್ರೆ ಮಾಡಿದರೆ ನಾವೂ ಪಾಲ್ಗೊಳ್ಳುತ್ತೇವೆ ಎಂದರು.

ಸಂಗೊಳ್ಳಿ ರಾಯಣ್ಣ, ಕಿತ್ತೂರು ರಾಣಿ ಚನ್ನಮ್ಮ, ಹಲಗಲಿ ಬೇಡರು, ಸುರಪುರ ನಾಯಕರು ಬಿಜೆಪಿಯವರಿಗೆ ಬೇಡವಾದರೇ? ಇವರ ಗೌರವ ಇದ್ದರೇ ಇಂದೇ ಅವರ ರಥಯಾತ್ರೆಯಲ್ಲಿರುವ ಸಾವರ್ಕರ್ ಫೋಟೊ ಬದಲಿಸಲಿ ಎಂದು ಸವಾಲು ಹಾಕಿದರು.

ಅಧಿಕಾರ ಉಳಿಸಿಕೊಳ್ಳುವ ಕೊನೆಯ ಪ್ರಯತ್ನವಾಗಿ ಬಿಜೆಪಿ ಸಾವರ್ಕರ್ ಹೆಸರು ಬಳಸುತ್ತಿದೆ ..

ಗಣೇಶೋತ್ಸವದಲ್ಲಿ ವಿವಾದಿತ ಸಾವರ್ಕರ್ ಫೋಟೊ ಇಡುವಂತೆ ಬಿಜೆಪಿಯವರು ಕರೆ ನೀಡುವ ಬದಲು ನಮ್ಮವರೇ ಆದ ರಾಯಣ್ಣ, ಚನ್ನಮ್ಮನ ಫೋಟೊ ಇಟ್ಟು ಗೌರವ ಸಲ್ಲಿಸಿ. ವಿವಾದಿತ ವ್ಯಕ್ತಿಯನ್ನು ವೈಭವೀಕರಿಸುವುದು ಶೋಭೆ ತರುವುದಿಲ್ಲ ಎಂದು ಹೇಳಿದರು.

ಸಾವರ್ಕರ್ ರಥಯಾತ್ರೆ ಬದಲಿಗೆ ಕಾಂಗ್ರೆಸ್ ವತಿಯಿಂದ ಕನ್ನಡ ನಾಡಿನ ಸ್ವಾತಂತ್ರ್ಯ ಹೋರಾಟಗಾರಿಗೆ ಸೂಕ್ತ ಗೌರವ ನೀಡುವ ಕಾರ್ಯಕ್ರಮ ಶೀಘ್ರ ಹಾಕಿಕೊಳ್ಳಲಾಗುವುದು ಎಂದರು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

54 minutes ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

1 hour ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

1 hour ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

2 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

2 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

2 hours ago