ಬೆಂಗಳೂರು: ಪ್ರಿಯಕರನೊಬ್ಬ ಹಣಕ್ಕಾಗಿ ಪ್ರೇಯಸಿಯನ್ನೇ ಹತ್ಯೆ ಮಾಡಿರುವ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬುಧವಾರ ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಉಡುಪಿ ಮೂಲದ ಗಂಗಾ ( 34) ಕೊಲೆಯಾದ ಯುವತಿ.
ಕೊಲೆ ಆರೋಪಿ ಶ್ಯಾಮು (27) ದಾಂಡೇಲಿ ಮೂಲದವನಾಗಗಿದ್ದು, ಯೋಗ ಶಿಕ್ಷಕ ವೃತ್ತಿ ಮಾಡುತ್ತಿದ್ದ. ಆತನ ತರಬೇತಿ ಕೇಂದ್ರದಲ್ಲಿ ಗಂಗಾ ಯೋಗ ಕಲಿಯುತ್ತಿದ್ದಳು. ಈ ವೇಳೆ ಇಬ್ಬರ ನಡುವೆ ಪ್ರೇಮಾಂಕುವಾಗಿತ್ತು. ಇತ್ತ ಶ್ಯಾಮ್ನಿಂದ ಯೋಗ ತರಬೇತಿ ಪಡೆದಿದ್ದ ಗಂಗಾ ಪ್ರತ್ಯೇಕವಾಗಿ ಕ್ಲಾಸ್ ಮಾಡುತ್ತಿದ್ದಳು. ಅದಕ್ಕಾಗಿ ಶ್ಯಾಮ್ನಿಂದ ಗಂಗಾ ಒಂದು ಲಕ್ಷ ಹಣ ಪಡೆದಿದ್ದಳು.
ಇಬ್ಬರ ಮನೆಯಲ್ಲೂ ಒಪ್ಪಿಸಿ ಫೆಬ್ರವರಿಯಲ್ಲಿ ಮದುವೆಗೆ ಸಿದ್ಧತೆ ಮಾಡಿಕೊಂಡಿದ್ದರು. ಪ್ರೇಯಸಿಗಾಗಿ ಯಲಹಂಕ ನ್ಯೂ ಟೌನ್ನಲ್ಲಿ ಶ್ಯಾಮ್ ರೂಮ್ ಮಾಡಿಕೊಟ್ಟಿದ್ದ. ಬುಧವಾರ ರಾತ್ರಿ ಮನೆಗೆ ಬಂದಾಗ ಹಣದ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿದೆ. ಇದೇ ವೇಳೆ ಕೋಪಗೊಂಡ ಶ್ಯಾಮ್, ಗಂಗಾ ತಲೆಯನ್ನು ಗೋಡೆಗೆ ಹೊಡೆದು, ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಯಲಹಂಕ ನ್ಯೂ ಟೌನ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…