Featured

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ

ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಶ್ರೀಗಂಧ ನಗರದಲ್ಲಿ ನಡೆದಿದೆ.

ಚಿತ್ರದುರ್ಗ  ಮೂಲದ ತಿಪ್ಪೇಸ್ವಾಮಿ (28) ಮೃತ ಯುವಕ. ದಾವಣಗೆರೆ  ಮೂಲದ ಮಹಿಳೆ ಹಾಗೂ ಮೃತ ಯುವಕ ಒಂದೇ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಇನ್‌ಸ್ಟಾಗ್ರಾಮ್ ಮುಖಾಂತರ ಪರಿಚಯವಾಗಿ ಪ್ರೀತಿಯಲ್ಲಿ ಬಿದ್ದಿದ್ದರು.

ಇದನ್ನೂ ಓದಿ: 

ಮಹಿಳೆಗೆ ಮದುವೆಯಾಗಿದ್ದು, ಎರಡು ಮಕ್ಕಳಿದ್ದಾರೆ. ಸದ್ಯ ಪತಿ ಹಾಗೂ ಮಕ್ಕಳನ್ನು ಬಿಟ್ಟು ಬಂದಿದ್ದಳು. ಕಳೆದ ಎರಡು ತಿಂಗಳ ಹಿಂದೆ ಬೆಂಗಳೂರಿನ ಶ್ರೀಗಂಧ ನಗರದಲ್ಲಿ ಬಾಡಿಗೆ ಮನೆ ಪಡೆದು ಗಂಡ-ಹೆಂಡತಿ ಎಂದು ನಂಬಿಸಿ, ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದರು. ತಿಂಗಳಿಗೆ 3 ಸಾವಿರ ರೂ.ಯಂತೆ ಬಾಡಿಗೆ ಕೊಟ್ಟು ಜೊತೆಯಲ್ಲಿದ್ದರು.

ಇತ್ತೀಚಿಗೆ ಮಹಿಳೆ ನನ್ನ ಮೆಂಟೇನೆನ್ಸ್ ಆಗಲ್ಲ ಬಿಟ್ಟು ಬಿಡು ಎಂದು ಯುವಕನಿಗೆ ಕಿರುಕುಳ ನೀಡಿದ್ದಳು. ಇದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸದ್ಯ ಯುವಕನ ಸಾವಿಗೆ ಮಹಿಳೆಯೇ ಕಾರಣ ಎಂದು ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೀಗ ಮಹಿಳೆ ನಾಪತ್ತೆಯಾಗಿದ್ದು, ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.

ಇದನ್ನೂ ಓದಿ: 

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

5 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

5 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

5 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

5 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

6 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

6 hours ago