ಕಾಪು: ಕಾಪು ಕಟಪಾಡಿ ಪಡುಬಿದ್ರಿ ಶಿರ್ವ ಕಾರ್ಕಳ ಬೆಳ್ಮನ್ ಮುಂತಾದ ಕಡೆಗಳಲ್ಲಿ ನಿಲ್ಲಿಸಿದ್ದ ಲಾರಿ-ಟೆಂಪೋ ಇತ್ಯಾದಿ ವಾಹನಗಳ ಬ್ಯಾಟರಿ ಕಳವು ಮಾಡಿ ಮಾರಾಟ ಮಾಡುತ್ತಿದ್ದ ಕಳ್ಳತನ ಪ್ರಕರಣದ ಆರೋಪಿಗಳನ್ನು ಕಾಪು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವಾಹನಗಳ ಬ್ಯಾಟರಿ ಕಳವು ಮಾಡುತ್ತಿದ್ದ ಕಳ್ಳರನ್ನು ಮೇಲಾಧಿಕಾರಿ ಅವರ ನಿರ್ದೇಶನದಂತೆ ಕಾರ್ಕಳ ಪೊಲೀಸ್ ಉಪಾಧೀಕ್ಷಕರು ನೇತೃತ್ವದ ತಂಡ ಯಶಸ್ವಿ ಕಾರ್ಯಾಚರಣೆ ನಡೆಸಿ ಆರೋಪಿಗಳಾದ ಮಹಮ್ಮದ್ ಶರೀಫ್ ಕಾಪು , ಅಲ್ತಾಫ್ ಚಂದ್ರ ನಗರ ,ಅಬ್ದುಲ್ ರೆಹಮಾನ್ ಮೂಳೂರು, ಫರ್ಜೀನ್ ಅಹಮ್ಮದ್ ಮೂಳೂರು, ಅಫ್ಜಲ್ ರೆಹಮಾನ್ ಮೂಳೂರು, ಮಹಮ್ಮದ್ ಇಜಾಜ್ ಮೂಳೂರು, ಇವರನ್ನು ದಸ್ತಗಿರಿ ಮಾಡಿ ಆರೋಪಿಗಳಿಂದ 22 ಬ್ಯಾಟರಿ ಸ್ವಿಫ್ಟ್ ಕಾರ್ ಒಂದು ಆಲ್ಟೊ ಕಾರ್ ಹಾಗೂ ಇತರೆ ಸ್ವತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಪತ್ರಿಕಾ ಪ್ರಕಟಣೆ ತಿಳಿಸಿದೆ.
ಈ ಕಾರ್ಯಾಚರಣೆಯನ್ನು ಎಂ ವಿಷ್ಣುವರ್ಧನ್ ಐಪಿಎಸ್ ಮಾನ್ಯ ಪೊಲೀಸ್ ಅಧೀಕ್ಷಕರು ಉಡುಪಿ ಮತ್ತು ಶ್ರೀಕುಮಾರ ಚಂದ್ರ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಉಡುಪಿ ಇವರ ನಿರ್ದೇಶನದಂತೆ ವಿಜಯಪ್ರಸಾದ್ ಪೊಲೀಸ್ ಉಪಾಧೀಕ್ಷಕರು ಕಾರ್ಕಳ ವಿಭಾಗದ ಇವರ ಮಾರ್ಗದರ್ಶನದಲ್ಲಿ ಕಾಪು ವೃತ್ತ ನಿರೀಕ್ಷಕರಾದ ಶ್ರೀ ಪ್ರಕಾಶ್ ಇವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದು ಪಿಎಸ್ಐ ತಿಮ್ಮೇಶ್ ರಾಘವೇಂದ್ರ ಅಪರಾಧ ಪತ್ತೆ ತಂಡದ ಪ್ರವೀಣ್ ಕುಮಾರ್ ನಾರಾಯಣ ರಾಜೇಶ್ ಹೇಮರಾಜ್ ಸಂದೇಶ ಆನಂದ ರಘು ಸಂತೋಷ್ ಮೊದಲಾದವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…