Featured

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಾರ್ವಜನಿಕರು ಸಿಎಂಗೆ ನೀಡಿದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆ – vishwanews24

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಾರ್ವಜನಿಕರು ಸಿಎಂಗೆ ನೀಡಿದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆ

ಚಾಮರಾಜನಗರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಾರ್ವಜನಿಕರು ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿದ ಮನವಿಗಳು ಕಸದ ರಾಶಿಯಲ್ಲಿ ಪತ್ತೆಯಾಗಿದೆ.

ಜುಲೈ 10ರಂದು ಚಾಮರಾಜನಗರಕ್ಕೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಕೃತಜ್ಞತಾ ಸಮಾವೇಶದಲ್ಲಿ ಭಾಗಿಯಾಗಿದ್ದರು. ಈ ವೇಳೆ ರೈತರು, ಆಕ್ಸಿಜನ್ ದುರಂತದ ಸಂತ್ರಸ್ತರು ಸಿಎಂ ಅವರಿಗೆ ಮನವಿ ಪತ್ರಗಳನ್ನು ನೀಡಿದ್ದರು. ವಿವಿಧ ಬೇಡಿಕೆಗಳ ಈಡೇರಿಕೆ ಮತ್ತು ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಜನರು ಮನವಿ ಸಲ್ಲಿಸಿದ್ದರು. ಆದರೆ ಜನರು ಸಲ್ಲಿಸಿದ್ದ ಮನವಿ ಪತ್ರಗಳು ಇದೀಗ ಕಸದ ರಾಶಿಯಲ್ಲಿ ಪತ್ತೆಯಾಗಿರುತ್ತದೆ.

ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮನವಿ ಪತ್ರಗಳು ಬಿದ್ದಿವೆ. ಗಂಟೆಗಟ್ಟಲೆ ಕಾದು ಸಿಎಂಗೆ ಸಲ್ಲಿಸಿದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿವೆ. ಇದು ದುರಹಂಕಾರದ ಪರಮಾವಧಿ ಎಂದು ರೈತ ಸಂಘಟನೆಗಳು ಕಿಡಿ ಕಾರಿದೆ.

ಇನ್ನು ಕೂಡಲೇ ಸಿದ್ದರಾಮಯ್ಯ ಅವರು ಜನರ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ ಸಿಎಂ ಜಿಲ್ಲೆಗೆ ಬಂದಾಗ ಕಪ್ಪುಬಾವುಟ ಪ್ರದರ್ಶಿಸುವುದಾಗಿ ರೈತರು ಎಚ್ಚರಿಸಿದ್ದಾರೆ. ತಮ್ಮ ಮನವಿ ಪತ್ರಗಳನ್ನು ಕಸದ ಬುಟ್ಟಿಗೆ ಎಸೆಯಬೇಕಿದ್ದರೆ ತಮ್ಮ ಮನವಿಗಳನ್ನು ಸ್ವೀಕರಿಸಿದ್ದಾದರು ಯಾಕೆ? ಯಾಕಿಷ್ಟೊಂದು ನಿರ್ಲಕ್ಷ್ಯ? ಸ್ವತಃ ಮುಖ್ಯಮಂತ್ರಿಯನ್ನೇ ಭೇಟಿ ಮಾಡಿ ಸಲ್ಲಿಸಿದ್ದ ಮನವಿ ಪತ್ರಗಳಿಗೆ ಈ ಗತಿಯಾದರೆ ಅಧಿಕಾರಿಗಳಿ ಸಲ್ಲಿಸುವ ಮನವಿ ಗಳ ಕಥೆ ಏನು? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

2 hours ago

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …

2 hours ago

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

2 hours ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

2 hours ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

2 hours ago

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

3 hours ago