ಬೆಳಗಾವಿ: ಬೆಂಬಲ ಬೆಲೆ ಖಾತ್ರಿಪಡಿಸುವ ಕಾನೂನು ಜಾರಿ ಸೇರಿದಂತೆ ವಿವಿಧ ಬೇಡಿಕೆಗೆಗಳ ಈಡೇರಿಕೆಗೆ ಆಗ್ರಹಿಸಿ ವಿವಿಧ ರಾಜ್ಯಗಳ ರೈತರು ʻದೆಹಲಿ ಚಲೋʼ ಪ್ರತಿಭಟನೆ ಆರಂಭಿಸಿದ್ದಾರೆ. ಈ ಬೆನ್ನಲ್ಲೇ ರಾಜ್ಯದಲ್ಲಿಯೂ ರೈತರು ತಮ್ಮ ಬೇಡಿಕೆಗಳನ್ನು ಒತ್ತಾಯಿಸಿ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದಾರೆ.
ಕರ್ನಾಟಕ ರಾಜ್ಯ ರೈತ ಸಂಘಗಳ ಒಕ್ಕೂಟ ಆಶ್ರಯದಲ್ಲಿವಿವಿಧ ಬೇಡಿಕೆಗೆ ಆಗ್ರಹಿಸಿ ಫೆ.17ರಂದು ʻಬೆಂಗಳೂರು ಚಲೋʼ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶಕ್ಕೆ ಬರುವ ರೈತರಿಗೆ ಆಯಾ ಜಿಲ್ಲೆಗಳಿಂದ ಉಚಿತ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘಗಳ ಒಕ್ಕೂಟ ಅಧ್ಯಕ್ಷ ಬೀರಪ್ಪ ದೇಶನೂರ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಫೆ.17ರಂದು ರೈತರು ತಮ್ಮ ಬೇಡಿಕೆಗಳನ್ನು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರ ಸಲ್ಲಿಸಲಿದ್ದಾರೆ. ಈ ಬೃಹತ್ ಸಮಾವೇಶದಲ್ಲಿ ರಾಜ್ಯಾದ್ಯಂತ ಸುಮಾರು 15 ಸಂಘಟನೆಗಳ ರೈತ ಮುಖಂಡರು, ರೈತ ಮಹಿಳೆಯರು, ವಿವಿಧ ಸಂಘಟನೆಯ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ಫೆ.16ರಂದು ಸಂಜೆ ಪ್ರತಿಯೊಬ್ಬ ರೈತರೂ ತಮ್ಮ ಜಿಲ್ಲೆಯ ಹಾಗೂ ತಾಲೂಕು, ಪಟ್ಟಣ, ಗ್ರಾಮಗಳಿಂದ ಬೆಂಗಳೂರಿಗೆ ಬರಬೇಕು ಎಂದು ಮನವಿ ಮಾಡಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…