ವಿವಿಧ ರಾಜ್ಯಗಳ ಭಾರತೀಯರು ಪರಸ್ಪರ ಹಿಂದಿಯಲ್ಲಿ ಸಂವಹನ ನಡೆಸಬೇಕು ಹೊರತು ಇಂಗ್ಲಿಷ್‌ನಲ್ಲಿ ಅಲ್ಲ : ಅಮಿತ್ ಶಾ – Vishwanews24
ವಿವಿಧ ರಾಜ್ಯಗಳ ಭಾರತೀಯರು ಪರಸ್ಪರ ಹಿಂದಿಯಲ್ಲಿ ಸಂವಹನ ನಡೆಸಬೇಕು ಹೊರತು ಇಂಗ್ಲಿಷ್‌ನಲ್ಲಿ ಅಲ್ಲ : ಅಮಿತ್ ಶಾ – Vishwanews24
ನವದೆಹಲಿ: ವಿವಿಧ ರಾಜ್ಯಗಳ ಭಾರತೀಯರು ಪರಸ್ಪರ ಹಿಂದಿಯಲ್ಲಿ ಸಂವಹನ ನಡೆಸಬೇಕು ಹೊರತು ಇಂಗ್ಲಿಷ್‌ನಲ್ಲಿ ಅಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಸಂಸದೀಯ ಅಧಿಕೃತ ಭಾಷಾ ಸಮಿತಿಯ 37 ನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾ, ವಿವಿಧ ರಾಜ್ಯಗಳ ನಾಗರಿಕರು ಪರಸ್ಪರ ಸಂವಹನ ನಡೆಸಿದಾಗ ಅದು ಭಾರತದ ಭಾಷೆಯಲ್ಲಿರಬೇಕು ಎಂದು ಹೇಳಿದ್ದಾರೆ.

ಹಿಂದಿಯನ್ನು ಇಂಗ್ಲೀಷ್ ಗೆ ಪರ್ಯಾಯವನ್ನಾಗಿ ಬೆಳೆಸಬೇಕು ಆದರೆ ಸ್ಥಳೀಯ ಭಾಷೆಗಳಿಗೆ ಪರ್ಯಾಯವಾಗಿ ಅಲ್ಲ. ಬೇರೆ ಸ್ಥಳೀಯ ಭಾಷೆಗಳಿಂದ ಶಬ್ದಗಳನ್ನು ಸ್ವೀಕರಿಸುವ ಮೂಲಕ ಹಿಂದಿಯನ್ನೂ ಬೆಳೆಸಬೇಕು ಎಂದು ಅಮಿತ್ ಶಾ ಅಭಿಪ್ರಾಯಪಟ್ಟಿದ್ದಾರೆ.

ಅಲ್ಲದೆ, ಆಡಳಿತ ಭಾಷೆಯನ್ನು ದೇಶದ ಏಕತೆಯ ಪ್ರಮುಖ ಅಂಗವಾಗಿಸುವ ಸಮಯ ಈಗ ಬಂದಿದೆ ಎಂದು ಇದೇ ವೇಳೆ ಒತ್ತಿ ಹೇಳಿದ್ದಾರೆ.
